ಬೆಂಗಳೂರು: ಗ್ರಾ. ಪಂ ಕಾರ್ಯದರ್ಶಿ ಗ್ರೇಡ್-2 ಆಗಿ ಗ್ರಾಮ ಪಂಚಾಯಿತಿ ಸಿಬ್ಬಂದಿ ನೇರ ನೇಮಕಾತಿ ನಿಯಮಗಳ ತಿದ್ದುಪಡಿಗೆ ಸರ್ಕಾರ ಅನುಮೋದನೆ ನೀಡಿದೆ.
ಆರ್ಥಿಕ ಇಲಾಖೆ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸೇವೆ ಹುದ್ದೆ ಖಾಲಿಯಿದೆ. ಇದರೊಳಗೆ ನೇರ ನೇಮಕಾತಿ ಕೋಟಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅವಶ್ಯಕತೆಗೆ ಅನುಗುಣವಾಗಿ ಗ್ರಾಮ ಪಂಚಾಯತಿ ಸಿಬ್ಬಂದಿಯಿಂದ ಲಭ್ಯವಾಗುವ ಹುದ್ದೆಗಳನ್ನು ಆಯ್ಕೆ ಮೂಲಕ ನಿಯಮಾನುಸಾರ ತುಂಬಲು ಸಹಮತಿಸಿದೆ.
ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬಿಲ್ ಕಲೆಕ್ಟರ್‌ಗಳು ವಯೋನಿವೃತ್ತಿ ಹೊಂದುವ ಅಂಚಿನಲ್ಲಿದ್ದಾರೆ. ಈ ಸೇವೆಯೊಳಗೆ ನೇರ ನೇಮಕಾತಿ ಹೊಂದಲು ಅವಕಾಶ ವಂಚಿತರಾಗಲಿದ್ದಾರೆ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಬಿಲ್ ಕಲೆಕ್ಟರ್, ಲೆಕ್ಕಿಗರು, ಗುಮಾಸ್ತರು, ಬೆರಳಚ್ಚುಗಾರ ವೃಂದದ ನೌಕರರ ಜೊತೆಗೆ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರನ್ನು ಕೂಡಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ಸೇವೆಯೊಳಗೆ ನೇರ ನೇಮಕಾತಿ ಮಾಡಲು ಅವಕಾಶ ಕಲ್ಪಿಸಬೇಕಾಗಿದೆ.
ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಸಾಕಷ್ಟು ಕಾಲಾವಕಾಶ ಬೇಕಾಗಿರುವುದರಿಂದ ಕಾರ್ಯಕಾರಿ ಆದೇಶದ ಮೂಲಕ ನೇಮಕಾತಿ ವಿಧಾನವನ್ನು ನಿಗದಿಪಡಿಸಿ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ವಿಧಾನವನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ.
ಇದನ್ನೂ ಓದಿ:ವೀಕೆಂಡ್ ಕರ್ಫ್ಯೂ ನಿರ್ಲಕ್ಷ್ಯ: ಉಡುಪಿಯಲ್ಲಿ ಬೀಚ್ಗಿಳಿದು ಪ್ರವಾಸಿಗರ ಮೋಜು