ಬೆಂಗಳೂರು:ರಾಜ್ಯದ ಎರಡು ಶಿಕ್ಷಕರ ಕ್ಷೇತ್ರ ಮತ್ತು ಎರಡು ಪದವೀಧರರ ಕ್ಷೇತ್ರದ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದ್ದು, ಪಶ್ಚಿಮ ಶಿಕ್ಷಕರ ಕ್ಷೇತ್ರ,ವಾಯುವ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಉತ್ತಮ ಮತದಾನವಾಗಿದ್ದು, ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಮತದಾನದ ಪ್ರಮಾಣ ಕಡಿಮೆಯಾಗಿದೆ.
ರಾಜ್ಯದ ಎರಡು ಶಿಕ್ಷಕರ ಮತ್ತು ಎರಡು ಪದವೀಧರರ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೂ ಮತದಾನ ನಡೆಯಿತು. ಮತಗಟ್ಟೆಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸವುದರೊಂದಿಗೆ ಮತದಾನ ಪ್ರಕ್ರಿಯೆ ನಡೆದಿದೆ. ಬೆಳಗ್ಗೆ ಚುರುಕಿನಿಂದ ಆರಂಭಗೊಂಡ ಮತದಾನ ಪ್ರಕ್ರಿಯೆ ಮಧ್ಯಾಹ್ನ ಮಂದಗತಿಯಲ್ಲಿ ಸಾಗಿ, ಬಳಿಕ ಸಂಜೆ ಚುರುಕು ಪಡೆದಿತ್ತು.