ಬೆಂಗಳೂರು :ಉತ್ತರಪ್ರದೇಶದ ಹಥ್ರಾಸ್ನಲ್ಲಿ ನಡೆದ ಅಮಾನವೀಯ ಅತ್ಯಾಚಾರ ಖಂಡಿಸಿ ನಗರದ ಗಾಂಧಿ ಭವನದಲ್ಲಿ ಗ್ರಾಮ ಸೇವಾ ಸಂಘದ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಹಥ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ಗ್ರಾಮ ಸೇವಾ ಸಂಘದಿಂದ ಉಪವಾಸ ಸತ್ಯಾಗ್ರಹ - ಬಾಲಕಿ ಮೇಲೆ ಅತ್ಯಾಚಾರ
ಹಥ್ರಾಸ್ನಲ್ಲಿ ನಡೆದಿದ್ದ ಅತ್ಯಾಚಾರ ಖಂಡಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ದೇಶಾದ್ಯಂತ ಒತ್ತಾಯ ಕೇಳಿ ಬರ್ತಿದೆ..
ಗ್ರಾಮ ಸೇವಾ ಸಂಘ ಮಹಿಳೆಯರ ಉಪವಾಸ ಸತ್ಯಾಗ್ರಹ
ಗ್ರಾಮೋದ್ಯೋಗ ಉಳಿಸಿ ಆಂದೋಲನದ ಸಲುವಾಗಿ, ಚರಕ, ಕೈಮಗ್ಗ ಸಹಕಾರ ಸಂಘದ ಮಹಿಳೆಯರು, ಹೆಣ್ಣುಮಕ್ಕಳು ಹಥ್ರಾಸ್ ಅತ್ಯಾಚಾರ ಸುದ್ದಿಯಿಂದ ಆತಂಕಿತರಾಗಿದ್ದಾರೆ. ಅಲ್ಲದೆ ರಾಜ್ಯದ ರಾಜಕೀಯ ನಾಯಕರಾದ್ರೂ ಹೆಣ್ಣುಮಕ್ಕಳ ರಕ್ಷಣೆಗೆ ನಿಲ್ಲುತ್ತಾರೆ ಎಂಬ ಭರವಸೆಯಿಂದ ಇಂದು ಮತ್ತು ನಾಳೆ ಉಪವಾಸ ಸತ್ಯಾಗ್ರಹ ನಡೆಸಿ ಶಾಂತಿಯುತ ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದಿದ್ದಾರೆ.
ಮಹಿಳೆಯರಿಗೆ ರಕ್ಷಣೆಯೇ ಇಲ್ಲವೇನೋ ಎಂಬಂತಾಗಿದೆ ಎಂದು ಆತಂಕ ಹೊರ ಹಾಕಿದ್ದಾರೆ.