ಕರ್ನಾಟಕ

karnataka

ETV Bharat / state

ಗ್ರಾ.ಪಂ.ಚುನಾವಣೆ: ರಾಜಕೀಯ ಪಕ್ಷಗಳ ಹಸ್ತಕ್ಷೇಪ ತಡೆಯಲು ಆಯೋಗದಿಂದ ಸುತ್ತೋಲೆ

ಗ್ರಾಮ ಪಂಚಾಯಿತಿ ಚುನಾವಣೆಗಳು ಪಕ್ಷರಹಿತ ಚುನಾವಣೆಯಾಗಿರುತ್ತದೆ. ರಾಜಕೀಯ ಪಕ್ಷಗಳು ಈ ಚುನಾವಣೆಯಲ್ಲಿಯೂ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ, ಸಭೆ ಸಮಾರಂಭಗಳನ್ನು ನಡೆಸುವ, ರಾಜಕೀಯ ಮುಖಂಡರುಗಳ ಭಾವಚಿತ್ರಗಳನ್ನು ಕರ ಪತ್ರಗಳಲ್ಲಿ ಮುದ್ರಿಸಿ ಪಕ್ಷಗಳ ಬಾವುಟ ಮತ್ತು ಚಿಹ್ನೆಯನ್ನು ಬಳಸಿಕೊಂಡು ಪ್ರಚಾರ ಮಾಡಬಾರದು ಎಂದು ರಾಜ್ಯ ಚುನಾವಣಾ ಆಯೋಗ ವಿಶೇಷ ಸುತ್ತೋಲೆ ಹೊರಡಿಸಿದೆ.

ಆಯೋಗದಿಂದ ಸುತ್ತೋಲೆ
ಆಯೋಗದಿಂದ ಸುತ್ತೋಲೆ

By

Published : Dec 13, 2020, 3:12 PM IST

Updated : Dec 13, 2020, 5:24 PM IST

ಬೆಂಗಳೂರು:ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ರಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ತಡೆಗಟ್ಟುವ ಸಲುವಾಗಿ ರಾಜ್ಯ ಚುನಾವಣಾ ಆಯೋಗ ವಿಶೇಷ ಸುತ್ತೋಲೆ ಹೊರಡಿಸಿದೆ.

ರಾಜ್ಯ ಚುನಾವಣಾ ಆಯೋಗದ ಸುತ್ತೋಲೆ

ಚುನಾವಣಾ ಆಯೋಗದ ಸುತ್ತೋಲೆಯಲ್ಲಿರುವ ಅಂಶಗಳು:

ಈ ಸುತ್ತೋಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ಪಕ್ಷರಹಿತ ಚುನಾವಣೆಯಾಗಿರುತ್ತದೆ. ರಾಜಕೀಯ ಪಕ್ಷಗಳು ಈ ಚುನಾವಣೆಯಲ್ಲಿಯೂ ಪ್ರಚಾರಕಾರ್ಯದಲ್ಲಿ ಭಾಗಿಯಾಗುವ, ಸಭೆ ಸಮಾರಂಭಗಳನ್ನು ನಡೆಸುವ, ರಾಜಕೀಯ ಮುಖಂಡರುಗಳ ಭಾವಚಿತ್ರಗಳನ್ನು ಕರ ಪತ್ರಗಳಲ್ಲಿ ಮುದ್ರಿಸಿ ಪಕ್ಷಗಳ ಬಾವುಟ ಮತ್ತು ಚಿಹ್ನೆಯನ್ನು ಬಳಸಿಕೊಂಡು ಪ್ರಚಾರ ಮಾಡುವ ಸಂಭವ ಇರುತ್ತದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ರಾಜ್ಯ ಚುನಾವಣಾ ಆಯೋಗದ ಸುತ್ತೋಲೆ

ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ಈ ಕೆಳಕಂಡಂತೆ ತಿಳುವಳಿಕೆ ನೀಡುವುದು. ಈ ಬಗ್ಗೆ ಸ್ಥಳೀಯ ಪತ್ರಿಕೆಗಳಲ್ಲಿ, ಸುದ್ದಿ ಮಾಧ್ಯಮದಲ್ಲಿ (ವೆಚ್ಚ ಬಾರದಂತೆ) ಪ್ರಕಟಿಸಲು ಕ್ರಮವಹಿಸಬೇಕು ಎಂದು ವಿವರಿಸಲಾಗಿದೆ.

1. ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಬಾವುಟ, ಬ್ಯಾನರ್‌ಗಳನ್ನು ಬಳಸುವಂತಿಲ್ಲ.

2. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ಕೋರುವಂತಿಲ್ಲ.

3. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ/ ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು/ಹಂಚುವುದು ಮಾಡುವಂತಿಲ್ಲ.

4. ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್‌ಗಳು, ಬ್ಯಾನರ್ ಮತ್ತು ಬಂಟಿಂಗ್‌ಗಳ ಮೂಲಕ ಪ್ರಚಾರ ಮಾಡುವಂತಿಲ್ಲ.

5. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿ.ವಿ. ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ.

ಓದಿ:ಸಾರಿಗೆ ಸಿಬ್ಬಂದಿ ಮುಷ್ಕರ ; ವಿಕಾಸಸೌಧದ ನಂತರ ಸಿಎಂ ನಿವಾಸದಲ್ಲಿ ಮಹತ್ವದ ಸಭೆ

ಈ ಮೇಲಿನ ಪ್ರಕರಣಗಳು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ, ಅಂತಹ ಚುನಾವಣೆ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ವಿಷಯವನ್ನು ತಮಗೆ ತಿಳಿಸಲು ನಾನು ನಿರ್ದೇಶಿತನಾಗಿದ್ದೇನೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Last Updated : Dec 13, 2020, 5:24 PM IST

ABOUT THE AUTHOR

...view details