ಬೆಂಗಳೂರು: ಮಧ್ಯಪ್ರದೇಶ ಹೈಕೋರ್ಟ್ನಿಂದ ರಾಜ್ಯ ಹೈಕೋರ್ಟ್ಗೆ ವರ್ಗಾವಣೆಗೊಂಡಿರುವ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾರನ್ನು ವಕೀಲರ ಸಂಘ ಆತ್ಮೀಯವಾಗಿ ಸ್ವಾಗತಿಸಿದೆ.
ರಾಜ್ಯ ಹೈಕೋರ್ಟ್ಗೆ ವರ್ಗಾವಣೆಗೊಂಡಿರುವ ನ್ಯಾ. ಸತೀಶ್ ಚಂದ್ರ ಶರ್ಮಾಗೆ ಅದ್ಧೂರಿ ಸ್ವಾಗತ
ಹೈಕೋರ್ಟ್ನ ವಕೀಲರ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶ ಹೈಕೋರ್ಟ್ನಿಂದ ರಾಜ್ಯ ಹೈಕೋರ್ಟ್ಗೆ ವರ್ಗಾವಣೆಗೊಂಡಿರುವ ನ್ಯಾ. ಸತೀಶ್ ಚಂದ್ರ ಶರ್ಮರನ್ನು ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಹಾಗೂ ಪದಾಧಿಕಾರಿಗಳು ಸ್ವಾಗತಿಸಿದ್ದಾರೆ.
ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಕಾನೂನು ಪದವಿ ಪಡೆದಿರುವ ಇವರು, ಸಂವಿಧಾನ, ಸೇವಾ ನಿಯಮಗಳು, ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ಪರಿಣಿತರಾಗಿದ್ದಾರೆ. 2008ರ ಜನವರಿ 18ರಿಂದ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ, ಎಎಬಿ ಪ್ರಧಾನ ಕಾರ್ಯದರ್ಶಿ ಎನ್.ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ ಇದ್ದರು. ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ರಾಜ್ಯ ಹೈಕೋರ್ಟ್ಗೆ ವರ್ಗಾವಣೆಯಾಗಿ ಬಂದಿರುವ ನ್ಯಾ. ಸತೀಶ್ ಚಂದ್ರ ಶರ್ಮಾ ಮಧ್ಯಪ್ರದೇಶ ಹೈಕೋರ್ಟ್ ಎರಡನೇ ಹಿರಿಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರು.