ಬೆಂಗಳೂರು: ಗಾಣಿಗ ಜನಾಂಗದ ಗುರುಪೀಠಕ್ಕೆ ನೀಡಿದ 5 ಕೋಟಿ ರೂ ಅನುದಾನ ಮತ್ತು ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್‌ಗೆ 8 ಎಕರೆ ಜಮೀನು ಮಂಜೂರು ಮಾಡಿದ್ದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿ.7ಕ್ಕೆ ಮುಂದೂಡಿತು.
ಈ ಸಂಬಂಧ ಎನ್.ಹನುಮೇಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸ್ವಯಂಪ್ರೇರಿತ(ಸುಮೋಟೋ) ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿವರ್ತನೆ ಮಾಡಿಕೊಂಡು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಲೆ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು.