ಕರ್ನಾಟಕ

karnataka

ETV Bharat / state

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 731.03 ಕೋಟಿ ರೂ. ಅನುದಾನ ಬಿಡುಗಡೆ

ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಅದರಂತೆ ಪ್ರಸಕ್ತ ಹಣಕಾಸು ವರ್ಷದ ಮೂರನೇ ಹಾಗೂ ನಾಲ್ಕನೇ ಕಂತಿನ ಅನುದಾನ ನೀಡಿ ಸರ್ಕಾರ ಆದೇಶಿಸಿದೆ..

grants-for-kalyana-karnataka-regional-development-board
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 731.03 ಕೋಟಿ ರೂ. ಅನುದಾನ

By

Published : Feb 5, 2022, 11:00 PM IST

ಬೆಂಗಳೂರು:ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2021-22ನೇ ಸಾಲಿನ ಮೂರು ಮತ್ತು ನಾಲ್ಕನೇ ಕಂತಿನ ಅನುದಾನವಾದ 731.03 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಅದರಂತೆ ಪ್ರಸಕ್ತ ಹಣಕಾಸು ವರ್ಷದ ಮೂರನೇ ಹಾಗೂ ನಾಲ್ಕನೇ ಕಂತಿನ ಅನುದಾನ ನೀಡಿ ಸರ್ಕಾರ ಆದೇಶಿಸಿದೆ.

ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ 1492.97 ಕೋಟಿ ರೂ‌. ಅನುದಾನ ಹಂಚಿಕೆ ಮಾಡಲಾಗಿದೆ. ಅದರಂತೆ ಮೊದಲನೇ ಕಂತಿನ ಅನುದಾನ ರೂ.373.24 ಕೋಟಿ ಬಿಡುಗಡೆ ಮಾಡಲಾಗಿದೆ. ಎರಡನೇ ಕಂತಿನ ಅನುದಾನಗಳಾದ ರೂ.41.92 ಕೋಟಿ ಹಾಗೂ 346.77 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದೀಗ ಮೂರನೇ ಹಾಗೂ ನಾಲ್ಕನೇ ಕಂತಿನ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ:ಉಡುಪಿಯಲ್ಲಿ ಹಿಜಾಬ್‌, ಕೇಸರಿ ಶಾಲು ಪ್ರತಿಭಟನೆ : ಮಾರಕ ಆಯುಧಗಳೊಂದಿಗೆ ಬಂದಿದ್ದ ಇಬ್ಬರ ಬಂಧನ

For All Latest Updates

ABOUT THE AUTHOR

...view details