ಕರ್ನಾಟಕ

karnataka

ETV Bharat / state

ಮೇ 4ರಿಂದ ಹಸಿರು, ಕಿತ್ತಳೆ ವಲಯದಲ್ಲಿ ಸರ್ಕಾರಿ ಕಚೇರಿಗಳು ಆರಂಭಿಸಲು ಸರ್ಕಾರ ಸೂಚನೆ - ವಿಜಯ ಭಾಸ್ಕರ್ ಆದೇಶ

ಮೇ 4ರಿಂದ ಕಿತ್ತಳೆ ಮತ್ತು ಹಸಿರು ವಲಯಗಳಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸೂಚನೆ ನೀಡಿದ್ದಾರೆ.

government chief secretary Vijay Bhaskar
ಮೇ 4 ರಿಂದ ಹಸಿರು, ಕಿತ್ತಳೆ ವಲಯದಲ್ಲಿ ಸರ್ಕಾರಿ ಕಚೇರಿಗಳು ಆರಂಭ

By

Published : May 2, 2020, 11:19 PM IST

ಬೆಂಗಳೂರು: ಹಸಿರು ಮತ್ತು ಕಿತ್ತಳೆ ವಲಯ ಜಿಲ್ಲೆಗಳ ಎಲ್ಲ ಸರ್ಕಾರಿ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಆದೇಶ ನೀಡಿದ್ದಾರೆ.

ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಆದೇಶ
ಮೇ 4 ರಿಂದ ಕಿತ್ತಳೆ ಮತ್ತು ಹಸಿರು ವಲಯಗಳಲ್ಲಿ ಎಲ್ಲ ಸರ್ಕಾರಿ ಕಚೇರಿಗಳೂ ಪೂರ್ಣ ಪ್ರಮಾಣದಲ್ಲಿ ಆರಂಭವಾಗಬೇಕು.‌ ಶೇ 100ರಷ್ಟು ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ. ಇನ್ನು ಕೆಂಪು ಜಿಲ್ಲೆಗಳಾದ ಬೆಂಗಳೂರು, ಬೆಂ.ಗ್ರಾಮಾಂತರ ಹಾಗೂ ಮೈಸೂರಿನಲ್ಲಿ ಅಗತ್ಯ ಸೇವೆ ನೀಡುವ 18 ಇಲಾಖೆಗಳ ಎಲ್ಲ ಎ,ಬಿ,ಸಿ ಮತ್ತು ಡಿ ವೃಂದದ ಎಲ್ಲಾ ಸಿಬ್ಬಂದಿ ಕಚೇರಿಗೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ. ಇತರ ಇಲಾಖೆ ಎಲ್ಲ ಕಚೇರಿಗಳಲ್ಲಿ ಶೇ 33 ರಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ.

ABOUT THE AUTHOR

...view details