ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ(NEP)ಅಧ್ಯಕ್ಷ, ಹಿರಿಯ ವಿಜ್ಞಾನಿ ಕಸ್ತೂರಿ ರಂಗನ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿಗೆ ಗ್ರೀನ್ ಸಿಗ್ನಲ್: ಕಸ್ತೂರಿ ರಂಗನ್ರನ್ನು ಅಭಿನಂದಿಸಿದ ಸಿಎಂ - ಕಸ್ತೂರಿ ರಂಗನ್
ರಾಷ್ಟ್ರೀಯ ಶಿಕ್ಷಣ ನೀತಿಗೆ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಕೂಡಿಗೆಹಳ್ಳಿಯಲ್ಲಿರುವ ಕಸ್ತೂರಿ ರಂಗನ್ ಅವರ ನಿವಾಸಕ್ಕೆ ಸಿಎಂ ಭೇಟಿ ನೀಡಿ, ಅವರಿಗೆ ಅಭಿನಂದನೆ ಸಲ್ಲಿಸಿದರು.
ಕಸ್ತೂರಿ ರಂಗನ್ರನ್ನು ಅಭಿನಂದಿಸಿದ ಸಿಎಂ
ಕೂಡಿಗೆಹಳ್ಳಿಯಲ್ಲಿರುವ ಕಸ್ತೂರಿ ರಂಗನ್ ಅವರ ನಿವಾಸಕ್ಕೆ ಸಿಎಂ ಭೇಟಿ ನೀಡಿದರು. ಸಿಎಂಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ಸದಸ್ಯ ರವಿಕುಮಾರ್ ಸಾಥ್ ನೀಡಿದರು.
ಕಸ್ತೂರಿ ರಂಗನ್ ನೇತೃತ್ವದ ಸಮಿತಿ 2019 ರ ಮೇನಲ್ಲಿ ಹೊಸ ಶಿಕ್ಷಣ ನೀತಿಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತ್ತು. ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ಅವರ ವರದಿಯನ್ನು 2020 ಜುಲೈ 29 ರಂದು ಜಾರಿಗೆ ತರಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಸಿಎಂ ಅಭಿನಂದನೆ ಸಲ್ಲಿಸಿದರು.
Last Updated : Jul 31, 2020, 5:35 PM IST