ಕರ್ನಾಟಕ

karnataka

ETV Bharat / state

ಮಕ್ಕಳೇ ಶಾಲೆಗೆ ಹೋಗಲು ರೆಡಿಯಾಗಿ: ತರಗತಿ ಪುನಾರಂಭಕ್ಕೆ ದಿನಾಂಕ ಘೋಷಿಸಿದ ಸರ್ಕಾರ - ಶಾಲೆ ಆರಂಭ

ಎಸ್ಸೆಸ್ಸೆಲ್ಸಿ, ಪಿಯುಸಿ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರದ ಒಪ್ಪಿಗೆ
ಎಸ್ಸೆಸ್ಸೆಲ್ಸಿ, ಪಿಯುಸಿ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರದ ಒಪ್ಪಿಗೆ

By

Published : Dec 19, 2020, 1:38 PM IST

Updated : Dec 19, 2020, 3:15 PM IST

13:35 December 19

10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿ ವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರು: ಕೋವಿಡ್ ಕಾರಣಕ್ಕೆ ಬಂದ್ ಆಗಿದ್ದ ಶಾಲೆಗಳು ಮುಂದಿನ ವರ್ಷ ಅಂದರೆ ಜನವರಿ ಒಂದರಿಂದ ಆರಂಭವಾಗಲಿವೆ. 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.  

ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸಿ, 15 ದಿನಗಳ ಕಾಲ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಇತರ ತರಗತಿಗಳನ್ನು ಪ್ರಾರಂಭಿಸುವ ಕುರಿತು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.

ಶಾಲೆಗಳನ್ನು ಮರುಪ್ರಾರಂಭಿಸುವ ಸಂದರ್ಭದಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಮಕ್ಕಳು ಶಾಲೆಗೆ ಮತ್ತು ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದೆ. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್-19 ಸೋಂಕಿನ ಲಕ್ಷಣಗಳಿಲ್ಲವೆಂದು ದೃಢೀಕರಿಸಬೇಕು.

ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು, ಪ್ರವೇಶ ಪಡೆಯುವ 72  ಗಂಟೆಗಳ ಅಂತರದಲ್ಲಿ ಕೋವಿಡ್-19 ಪರೀಕ್ಷೆ ಮಾಡಿಸಿ, ನೆಗೆಟಿವ್ ವರದಿಯನ್ನು ಸಲ್ಲಿಸಬೇಕು.

ಶಾಲೆ-ಕಾಲೇಜಿಗೆ ಹಾಜರಾತಿ ಕಡ್ಡಾಯವಲ್ಲ. ಆದರೆ ದಾಖಲಾತಿ ಕಡ್ಡಾಯವಾಗಿ ಆಗಲೇಬೇಕು.‌ ವಿದ್ಯಾರ್ಥಿಗಳು ಮನೆಯಲ್ಲಿಯೇ ಇದ್ದು ಆನ್​ಲೈನ್, ಯುಟ್ಯೂಬ್ ಚಾನೆಲ್ ಮತ್ತು ಇತರ ಮೂಲಗಳಿಂದಲೂ ಅಭ್ಯಾಸ ಮಾಡಬಹುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಶಾಲೆ-ಕಾಲೇಜುಗಳಲ್ಲಿ ತರಗತಿ ಕೊಠಡಿಗಳನ್ನು ಡಿಸ್-ಇನ್ಫೆಕ್ಷನ್ ಮಾಡಿಸುವ ಕುರಿತು ಮುನ್ನೆಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಅರ್ಧ ದಿನ ಮಾತ್ರ ತರಗತಿ ನಡೆಯಲಿದೆ. ಒಂದು ಕೊಠಡಿಯಲ್ಲಿ ಗರಿಷ್ಠ 15 ವಿದ್ಯಾರ್ಥಿಗಳಿಗೆ ತರಗತಿ ನಡೆಸಬೇಕು. ಬಿಸಿಯೂಟ ವಿತರಣೆ ಇರುವುದಿಲ್ಲ. ಬದಲಿಗೆ ಪ್ರಸ್ತುತ ಜಾರಿಯಲ್ಲಿರುವಂತೆ ಆಹಾರ ಸಾಮಗ್ರಿಯನ್ನು ಒದಗಿಸಲಾಗುವುದು.

ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತು ಶಿಕ್ಷಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಯಿತು.ವಿದ್ಯಾಗಮ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ವಾರಕ್ಕೆ ಎರಡು ಬಾರಿ ಶಾಲೆಗೆ ಹಾಜರಾಗಬಹುದಾಗಿದೆ.

Last Updated : Dec 19, 2020, 3:15 PM IST

ABOUT THE AUTHOR

...view details