ಕಾಲೇಜು ಶಿಕ್ಷಣ ಇಲಾಖೆಯಿಂದ ಪ್ರಸಕ್ತ ಅಂದರೆ 2023-24ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ/ ಅತಿಥಿ ಉಪನ್ಯಾಸಕರ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ:ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಸೇರಿದಂತೆ ವಿವಿಧ ವಿಷಯ ಬೋಧನೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಸಲಾಗುವುದು
ವಿದ್ಯಾರ್ಹತೆ: ಅಭ್ಯರ್ಥಿಗಳು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿಯನ್ನು ಪೂರ್ಣಗೊಳಿಸಿರಬೇಕು. ಪಿಎಚ್ಡಿ ವಿದ್ಯಾರ್ಹತೆ ಅಥವಾ ಎನ್ಇಟಿ, ಕೆ-ಸೆಟ್, ಎಸ್ಎಸ್ಎಲ್ಇಟಿ ವಿದ್ಯಾರ್ಹತೆ, ಎಂಫಿಲ್ ವಿದ್ಯಾರ್ಹತೆ ಪಡೆದವರಿಗೆ ಹೆಚ್ಚಿನ ಅವಕಾಶ ಲಭ್ಯವಿದೆ.
ಅನುಭವ: ಅಭ್ಯರ್ಥಿಗಳು ಈಗಾಗಲೇ ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮತ್ತು ಕೌನ್ಸಿಲಿಂಗ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು