ಕರ್ನಾಟಕ

karnataka

ETV Bharat / state

ಬಂಗಾಳ ಕೊಲ್ಲಿಯಲ್ಲಿ ಗುಲಾಬ್ ಸೈಕ್ಲೋನ್: ರಾಜ್ಯದಲ್ಲಿ ಮುಂದಿನ 3 ದಿನ ಮಳೆ ಮುನ್ಸೂಚನೆ - Gulab Cyclone Effect

ಗುಲಾಬ್​ ಸೈಕ್ಲೋನ್​​ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

rain
ಮಳೆ

By

Published : Sep 26, 2021, 6:05 PM IST

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಗುಲಾಬ್ ಚಂಡಮಾರುತ ಇಂದು ಒಡಿಶಾದ ಗೋಪಾಲಪುರ ಮತ್ತು ಆಂಧ್ರಪ್ರದೇಶದ ಕಳಿಂಗಪಟ್ಟಣದ ನಡುವೆ ಅಪ್ಪಳಿಸಲಿದೆ. ಪರಿಣಾಮ ಆಂಧ್ರ ಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ, ದೇಶದ ಪಶ್ಚಿಮ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲೂ ಗುಲಾಬ್ ಚಂಡಮಾರುತದ ಪ್ರಭಾವ

ಚಂಡಮಾರುತದ ಪ್ರಭಾವದಿಂದಾಗಿ ರಾಜಧಾನಿಯಲ್ಲೂ ನಿನ್ನೆ ರಾತ್ರಿ ವರುಣ ಅಬ್ಬರಿಸಿದ್ದಾನೆ. ನಗರದ ಮೆಜೆಸ್ಟಿಕ್, ಶಾಂತಿನಗರ, ಗುಟ್ಟಹಳ್ಳಿ, ಹೆಬ್ಬಾಳ, ಯಲಹಂಕ ಸೇರಿದಂತೆ ಹಲವು ಕಡೆ ಗಂಟೆಗಳ ಕಾಲ ಭರ್ಜರಿ ಮಳೆ ಸುರಿದಿದೆ. ಈ ವೇಳೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರರು ಪರದಾಡಿದರು.

ಗುಲಾಬ್​ ಸೈಕ್ಲೋನ್​​ ಎಫೆಕ್ಟ್​ನಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ಇಂದು ಸಿಎಂ ಜೊತೆ ಮತ್ತೊಂದು ಸುತ್ತಿನ ಮಾತುಕತೆ ಸಾಧ್ಯತೆ ಇದೆ: ಜಯಮೃತ್ಯುಂಜಯ ಶ್ರೀ

ABOUT THE AUTHOR

...view details