ಕರ್ನಾಟಕ

karnataka

ETV Bharat / state

ಈ ಬಾರಿ ನನಗೆ ಅವಕಾಶ ನೀಡಿ: ಜೆಡಿಎಸ್ ವರಿಷ್ಠರಿಗೆ ಪತ್ರ ಬರೆದ ಗುರುರಾಜ  ಹುಣಸಿಮರದ - ರಾಜ್ಯ ಯುವ ಜನತಾದಳದ ಮಾಜಿ ಅಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಗುರುರಾಜ ಇ. ಹುಣಸಿಮರದ

ವಿಧಾನ ಪರಿಷತ್​ಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ನೀಡುವಂತೆ ರಾಜ್ಯ ಯುವ ಜನತಾ ದಳದ ಗುರುರಾಜ ಇ. ಹುಣಸಿಮರ ಪಕ್ಷದ ವರಿಷ್ಠರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.

Gururaj E Hunasimarad
ಗುರುರಾಜ ಇ. ಹುಣಸಿಮರದ

By

Published : Jun 17, 2020, 1:39 PM IST

ಬೆಂಗಳೂರು:ವಿಧಾನ ಪರಿಷತ್​ಗೆ ನಡೆಯುವ ಚುನಾವಣೆಯಲ್ಲಿ ತಮಗೆ ಅವಕಾಶ ನೀಡುವಂತೆ ರಾಜ್ಯ ಯುವ ಜನತಾದಳದ ಮಾಜಿ ಅಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಗುರುರಾಜ ಇ. ಹುಣಸಿಮರದ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಅವರು, ನಾನು ಕಳೆದ 30 ವರ್ಷಗಳಿಂದ ಅಂದರೆ ವಿದ್ಯಾರ್ಥಿ ದೆಸೆಯಿಂದಲೇ ಪಕ್ಷದ ಕಾರ್ಯಕ್ರಮಗಳಲ್ಲಿ ಹಾಗೂ ಸಂಘಟನೆಯಲ್ಲಿ ತೊಡಗಿ ಪಕ್ಷದ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಕೆಲಸ ಮಾಡಿದ್ದೇನೆ. ಮೊದಲು 1989 ರಲ್ಲಿ ಜಿಲ್ಲಾ ವಿದ್ಯಾರ್ಥಿ ಜನತಾದಳ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ. ನಂತರ 1994ರಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಜನತಾ ದಳದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದೇನೆ. ನನ್ನನ್ನು ಪಕ್ಷದ ಮುಖಂಡರುಗಳು ರಾಜ್ಯ ಯುವ ಜನತಾ ದಳ (ಜಾ) ಅಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ ನಾನು ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷ ಮತ್ತು ಇತರ ಪಕ್ಷದ ಮುಖಂಡರೊಂದಿಗೆ ಸುತ್ತಾಡಿ ಪಕ್ಷವನ್ನು ಬಲಿಷ್ಠಗೊಳಿಸಲು ಶ್ರಮಿಸಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಜೆಡಿಎಸ್ ವರಿಷ್ಠರಿಗೆ ಬರೆದ ಪತ್ರ

2004 ರಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದಾಗಲೂ ಯಾವುದೇ ಅಧಿಕಾರ ನೀಡಿರಲಿಲ್ಲ. ನಾನು 2004 ರಲ್ಲಿ ಧಾರವಾಡ ವಿಧಾನಸಭೆ ಕ್ಷೇತ್ರದಿಂದ ಪಕ್ಷದ ವತಿಯಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡಿದ್ದೇನೆ. 2013 ಅಲ್ಲಿಯೂ ಸಹ ಸೋತ್ತಿದ್ದೇನೆ. ನನಗೆ ಪಕ್ಷ ಸಂಘಟಿಸುವುದರಲ್ಲಿ ಅನುಭವವಿದೆ. 2018 ರಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಿ ಫಾರಂ ನೀಡಿ ಕೊನೆಗಳಿಗೆಯಲ್ಲಿ ಮೋಸವಾಗಿ ನನ್ನನ್ನು ಚುನಾವಣೆಯಿಂದ ಹಿಂದೆ ಸರಿಯುವಂತೆ ಮಾಡಲಾಯಿತು. ನಾನು ವೀರಶೈವ ಲಿಂಗಾಯತ (ಪಂಚಮಸಾಲಿ) ಸಮಾಜಕ್ಕೆ ಸೇರಿದವನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ಅವಕಾಶ ನೀಡಿದರೆ ತಾವು ನನಗೆ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುಣಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಮಾಡಲು ನಾನು ವಿನಂತಿಸಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ನನಗೆ ಅವಕಾಶ ನೀಡಿದರೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ರೀತಿಯಿಂದ ಪಕ್ಷವನ್ನು ಸದೃಢವಾಗಿ ಕಟ್ಟುವುದರೊಂದಿಗೆ ಕಾರ್ಯಕರ್ತರನ್ನು ಹಾಗೂ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಕಟ್ಟಲು ಹೆಚ್ಚಿನ ಅವಕಾಶ ಕಲ್ಪಿಸಿದಂತಾಗುತ್ತದೆ. ತಾವು ನನಗೆ ಪಕ್ಷಕ್ಕಾಗಿ ನಾನು ಕೆಲಸ ನಿರ್ವಹಿಸಿದ ಆಧಾರದ ಮೇಲೆ ವಿಧಾನ ಪರಿಷತ್‌ಗೆ ಅವಕಾಶ ನೀಡಬೇಕೆಂದು ಕೋರಿದ್ದಾರೆ.

ABOUT THE AUTHOR

...view details