ಬೆಂಗಳೂರು:ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಒಳ್ಳೆಯ ಸಂಸದನಾಗುವುರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಜೆಡಿಎಸ್ ಕಚೇರಿ ಜೆಪಿ ಭವನದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಜ್ವಲ್ ಈಗ ಸಂಸದನಾಗಿದ್ದಾನೆ. ಅವನು ಸಂಸತ್ನಲ್ಲಿ ಹಾಸನ ಮಾತ್ರವಲ್ಲ, ರಾಜ್ಯದ ಎಲ್ಲ ಜಿಲ್ಲೆಗಳ ಬಗ್ಗೆ ಚರ್ಚೆ ಮಾಡುತ್ತಾನೆ. ಆ ಬಗ್ಗೆ ಕೆಲಸ ಮಾಡುವಂತೆ ಸೂಚಿಸಿದ್ದೇನೆ, ಸಂಸತ್ನ ಮೊದಲ ಭಾಷಣದಲ್ಲಿ ರಾಜ್ಯದ ಬಹುತೇಕ ಎಲ್ಲಾ ಸಮಸ್ಯೆಗಳ ಬಗ್ಗೆ ಮಂಡಿಸಿದ್ದಾನೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಹೋರಾಟ ನಡೆಸಿ, ರಾಜ್ಯಕ್ಕೆ ಒಳ್ಳೆಯ ಸಂಸದನಾಗುವುರಲ್ಲಿ ಯಾವುದೇ ಸಂಶಯವಿಲ್ಲ ಎಂದರು.