ಬೆಂಗಳೂರು: ಸಹೋದರಿ ಸುಷ್ಮಾ ಸ್ವರಾಜ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ತೀವ್ರ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ.
ಧೈರ್ಯವಂತೆ, ಮಾತೃಹೃದಯಿಯನ್ನು ಕಳೆದುಕೊಂಡಿದ್ದೇವೆ: ಸುಷ್ಮಾ ನಿಧನಕ್ಕೆ ದೊಡ್ಡ ಗೌಡರ ಕಂಬನಿ - Former Prime Minister HD Deve Gowda
ಸಹೋದರಿ ಸುಷ್ಮಾ ಸ್ವರಾಜ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ತೀವ್ರ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸುಷ್ಮಾ ಸ್ವರಾಜ್ ಅವರನ್ನು ನೋಡಿದ ತಕ್ಷಣ ಎಲ್ಲರಲ್ಲೂ ತಾಯಿ ಮನೋಭಾವ ಮೂಡುತಿತ್ತು .ಆಕೆ ಅತೀ ಚಿಕ್ಕ ವಯಸ್ಸಿನಲ್ಲೇ ಹರಿಯಾಣ ರಾಜ್ಯದಲ್ಲಿ ಸಂಪುಟ ದರ್ಜೆ ಸಚಿವೆ ಆಗಿ ಉತ್ತಮ ಕಾರ್ಯ ನಿರ್ವಹಿಸಸಿದ್ದರು. ಈ ದೇಶದ ಎರಡನೇ ಮಹಿಳಾ ವಿದೇಶಾಂಗ ಸಚಿವೆಯಾಗಿಯೂ ಉತ್ತಮ ಕಾರ್ಯ ನಿರ್ವಹಿಸಿದ್ದರು.
ಸುಷ್ಮಾ ನಿಧನದಿಂದ ನಮ್ಮ ದೇಶ ಒಬ್ಬ ಧೈರ್ಯವಂತೆ ಹಾಗೂ ಮಾತೃ ಹೃದಯಿ ಹೆಣ್ಣು ಮಗಳನ್ನು ಕಳೆದು ಕೊಂಡಿದ್ದೇವೆ. ಅವರ ನಿಧನದಿಂದ ರಾಷ್ಟ್ರಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ ಎಂದು ಹೇಳಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿಮತ್ತು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿಗಳಿಗೆ ದುಃಖ ಬರಿಸುವ ಶಕ್ತಿ ತುಂಬಲಿ ಎಂದು ದೇವೇಗೌಡರು ಕಂಬನಿ ಮಿಡಿದಿದ್ದಾರೆ.