ಬೆಂಗಳೂರು: ಉಪಚುನಾವಣೆ ನಂತರ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ವಿಶ್ರಾಂತಿ ಪಡೆಯುತ್ತಿದ್ದಾರೆ.
ಆಯುರ್ವೇದ ಚಿಕಿತ್ಸೆ ಪಡೆಯಲು ಕೇರಳಕ್ಕೆ ತೆರಳಿದ ಹೆಚ್.ಡಿ.ದೇವೇಗೌಡ - Deve Gowda Going to Kerala for Ayurvedic treatment
ಉಪಚುನಾವಣೆ ಫಲಿತಾಂಶ ಬಂದಾಗಿನಿಂದಲೂ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸದ ಗೌಡರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಈಗ ಆರೋಗ್ಯದ ಮೇಲೆ ಕಾಳಜಿ ತೋರಿಸಿರು, ಆಯುರ್ವೇದ ಚಿಕಿತ್ಸೆ ಪಡೆಯಲು ಕೇರಳಕ್ಕೆ ತೆರಳಿದ್ದಾರೆ.
ಉಪಚುನಾವಣಾ ಪ್ರಚಾರದ ವೇಳೆ ತಮ್ಮ ಇಳಿ ವಯಸ್ಸಿನಲ್ಲೂ ದೇವೇಗೌಡರು ಹಲವು ಕ್ಷೇತ್ರಗಳನ್ನು ಸುತ್ತಿ ಪ್ರಚಾರ ನಡೆಸಿದ್ದರು. ಆದರೂ, ಜೆಡಿಎಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಲಿಲ್ಲ. ಉಪಚುನಾವಣೆ ಫಲಿತಾಂಶ ಬಂದಾಗಿನಿಂದಲೂ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸದ ಗೌಡರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ತಮ್ಮ ಆರೋಗ್ಯದ ಮೇಲೆ ಕಾಳಜಿ ತೋರಿಸಿರುವ ದೇವೇಗೌಡರು, ಆಯುರ್ವೇದ ಚಿಕಿತ್ಸೆ ಪಡೆಯಲು ಕೇರಳಕ್ಕೆ ತೆರಳಿದ್ದಾರೆ.
ಕೇರಳದ ಕ್ಯಾಲಿಕಟ್ ಬಳಿ ಇರುವ ಆಯುರ್ವೇದ ಕೇಂದ್ರದಲ್ಲಿ ಒಂದು ವಾರಗಳ ಕಾಲ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೂ ಸಹ ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ದೇವೇಗೌಡರು ಚಿಕಿತ್ಸೆ ಪಡೆದಿದ್ದರು. ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರೂ ಕೂಡಾ ಅದೇ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ, ಈ ಬಾರಿ ದೇವೇಗೌಡರು ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ತೆರಳಿದ್ದಾರೆ.