ಬೆಂಗಳೂರು: ಆಧುನಿಕ ಸೂಫಿಸಂತ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರು ಇಂದು ಮುಂಜಾನೆ ನಿಧನ ಹೊಂದಿದ್ದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಗೋವಿಂದ್ ಕಾರಜೋಳ ಸೇರಿದಂತೆ ಅನೇಕ ನಾಯಕರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
"ಸಾಮರಸ್ಯದ ಕೊಂಡಿ, ಸೌಹಾರ್ದ ಸಮಾಜದ ಪ್ರತಿಪಾದಕರು ಪದ್ಮಶ್ರೀ ಪುರಸ್ಕೃತರಾಗಿದ್ದ ಕನ್ನಡದ ಕಬೀರ ಇಬ್ರಾಹಿಂ ಸುತಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ. ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. '' ಅಂತಾ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.