ಬೆಂಗಳೂರು:ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ನಡೆಸುತ್ತಿರುವ ಧರಣಿಗೆ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.
ಪ.ಪಂಗಡ ಮೀಸಲು ಬೇಡಿಕೆಗೆ ಹೆಚ್ಡಿಕೆ ಬೆಂಬಲ: ಕಲಾಪದಲ್ಲಿ ಪ್ರಸ್ತಾಪಿಸುವ ಭರವಸೆ - ಪರಿಶಿಷ್ಠ ಪಂಗಡದ ಮೀಸಲು ಬೇಡಿಕೆ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪ ಮಾಡುವುದಾಗಿ ಭರವಸೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ
ನಗರದ ಸ್ವಾತಂತ್ರ್ಯ ಉದ್ಯಾನವನಕ್ಕೆ ಪಕ್ಷದ ಹಿರಿಯ ಮುಖಂಡರು, ಶಾಸಕರ ಜೊತೆ ಇಂದು ಭೇಟಿ ನೀಡಿ ಶ್ರೀಗಳ ಕ್ಷೇಮ ವಿಚಾರಿಸಿದ ಕುಮಾರಸ್ವಾಮಿ, ನಾಯಕ ಸಮುದಾಯದ ಮೀಸಲು ಬೇಡಿಕೆಗೆ ಪಕ್ಷದ ಬೆಂಬಲವಿದೆ ಎಂದು ಘೋಷಿಸಿದರು.
ಪ.ಪಂ. ಮೀಸಲು ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ ಹೆಚ್ಡಿಕೆ
ಮಾಧ್ಯಮಗಳ ಜತೆ ಮಾತನಾಡಿದ ಹೆಚ್ಡಿಕೆ, ನಾನು ಮುಖ್ಯಮಂತ್ರಿಯಾಗಿದ್ದಾಗ ಸ್ವಾಮೀಜಿ ಮೀಸಲು ಪ್ರಮಾಣ ಹೆಚ್ಚಿಸುವಂತೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ್ದರು. ಆ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ರಾಜ್ಯ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹೆಚ್.ಎಸ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಆ ಸಮಿತಿಯೂ ಈಗಾಗಲೇ ವರದಿ ಸಲ್ಲಿಸಿದ್ದರೂ ಸರಕಾರ ಅನುಷ್ಠಾನಕ್ಕೆ ತಂದಿಲ್ಲ. ಕೂಡಲೇ ಸರಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
TAGGED:
ಮಾಜಿ ಸಿಎಂ ಕುಮಾರಸ್ವಾಮಿ ಭರವಸೆ