ಬೆಂಗಳೂರು:ದೆಹಲಿಯಲ್ಲಿ ಇಡಿ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಮತ್ತೆ ತಮ್ಮ ಬೆಂಬಲ ಸೂಚಿಸಿದ್ದಾರೆ.
ಮತ್ತೆ ಡಿಕೆಶಿ ಬೆನ್ನಿಗೆ ನಿಂತ ಮಾಜಿ ಸಿಎಂ... ಟ್ವೀಟ್ ಮೂಲಕ ಹೆಚ್ಡಿಕೆ ಹೇಳಿದ್ದೇನು? - twitter
ಇಡಿ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಡಿಕೆಶಿ ತಮ್ಮ ವಿರುದ್ಧದ ರಾಜಕೀಯ ಪ್ರೇರಿತ ಅಜೆಂಡಾ ಎದುರಿಸುವ ಶಕ್ತಿ ಹೊಂದಿದ್ದಾರೆ ಎಂಬ ವಿಶ್ವಾಸ ತನಗಿದೆ ಎಂದು ಟ್ವಿಟ್ಟರ್ ಮೂಲಕ ಬೆಂಬಲ ಸೂಚಿಸಿದ್ದಾರೆ.
tweet
ದ್ವೇಷ ರಾಜಕೀಯ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಬಿಟ್ಟಿದೆ. ಪ್ರತಿಪಕ್ಷ ನಾಯಕರು ಅಧಿಕಾರ ದುರುಪಯೋಗದ ಸುಲಭ ಬಲಿಪಶುಗಳಾಗಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶವನ್ನೂ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಪಿತೂರಿ ಹಾಗೂ ಆಧಾರರಹಿತ ಆರೋಪಗಳನ್ನು ಎದುರಿಸುವ ಧೈರ್ಯ ಇರಬೇಕು. ಡಿಕೆಶಿ ತಮ್ಮ ವಿರುದ್ಧದ ರಾಜಕೀಯ ಪ್ರೇರಿತ ಅಜೆಂಡಾ ಎದುರಿಸುವ ಶಕ್ತಿ ಹೊಂದಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಟ್ವಿಟ್ಟರ್ ಮೂಲಕ ಅಭಿಪ್ರಾಯ ಹೊರಹಾಕಿದ್ದಾರೆ ಹೆಚ್ಡಿಕೆ.