ಬೆಂಗಳೂರು: ಕಳೆದ 75 ವರ್ಷಗಳಿಂದ ನೀರಾವರಿ ಕ್ಷೇತ್ರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಜೆಡಿಎಸ್ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಐದೇ ವರ್ಷದಲ್ಲಿ ಸರಿಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಅವರು ಈ ಬಗ್ಗೆ ವಿವರ ನೀಡಿದರು.
ಇದೇ ತಿಂಗಳ 16ರಿಂದ ಪಕ್ಷದ ಮಹತ್ವಾಕಾಂಕ್ಷೆ ಕಾರ್ಯಕ್ರಮವಾದ ಜನತಾ ಜಲಧಾರೆ ಗಂಗಾ ರಥಯಾತ್ರೆಯನ್ನು ಆರಂಭ ಮಾಡಲಾಗುವುದು ಎಂದು ಅವರು ಘೋಷಣೆ ಮಾಡಿದರು. ಈಗಾಗಲೇ 15 ಗಂಗಾ ರಥಗಳು ಸಿದ್ಧ ಆಗಿವೆ. ಈ ತಿಂಗಳ 12ರಂದು ರಾಮನಗರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಈ ರಥಗಳಿಗೆ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ಹಸಿರು ನಿಶಾನೆ ತೋರಲಿದ್ದಾರೆ ಎಂದು ತಿಳಿಸಿದರು.