ಕರ್ನಾಟಕ

karnataka

ETV Bharat / state

ವಿದ್ಯಾರ್ಥಿ ಸಾವಿನ ಸುದ್ದಿ ಶಿವರಾತ್ರಿ ದಿನದಂದು ಬರಸಿಡಿಲಿನಂತೆ ಅಪ್ಪಳಿಸಿದೆ: ಹೆಚ್‌ಡಿಕೆ - ರಷ್ಯಾ ದಾಳಿಗೆ ಬಲಿಯಾದ ವಿದ್ಯಾರ್ಥಿ ನವೀನ್

ಭಾರತದಲ್ಲಿ ದುಬಾರಿ ವೈದ್ಯಕೀಯ ಶಿಕ್ಷಣ ಕೈಗೆಟುಕದೆ ನವೀನ್ ಉಕ್ರೇನ್​​ಗೆ ತೆರಳಿದ್ದರು. ಯುದ್ಧವು ಅವರ ಕನಸನ್ನು ನುಚ್ಚುನೂರು ಮಾಡಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

h-d-kumaraswamy
ಮಾಜಿ ಸಿಎಂ ಕುಮಾರಸ್ವಾಮಿ

By

Published : Mar 1, 2022, 7:29 PM IST

ಬೆಂಗಳೂರು:ಉಕ್ರೇನ್ ಮೇಲಿನ ರಷ್ಯಾ ದಾಳಿಯಲ್ಲಿ ಅಸುನೀಗಿದ ಹಾವೇರಿ ಜಿಲ್ಲೆಯ ವೈದ್ಯ ವಿದ್ಯಾರ್ಥಿ ನವೀನ್ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲ ಕನ್ನಡಿಗರನ್ನು ಕೂಡಲೇ ರಕ್ಷಿಸಬೇಕು ಎಂದು ಕೇಂದ್ರ-ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಷ್ಯಾ ತೀವ್ರವಾಗಿ ದಾಳಿ ಮಾಡಿರುವ ಖಾರ್ಕಿವ್ ಪ್ರದೇಶದಲ್ಲಿ ಕನ್ನಡಿಗರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅನ್ನ ನೀರಿಗೂ ಅವರು ಕಷ್ಟಪಡುತ್ತಿದ್ದಾರೆ. ಕೂಡಲೇ ಸರ್ಕಾರಗಳು ಅವರ ನೆರವಿಗೆ ಹೋಗಬೇಕು ಎಂದು ಆಗ್ರಹಿಸಿದ್ದಾರೆ.

ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಹಾವೇರಿ ಜಿಲ್ಲೆ ಚಳ್ಳಕೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿ ಆಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಯುದ್ಧದಿಂದ ತತ್ತರಿಸಿರುವ ಖಾರ್ಕೀವ್ ನಗರದಲ್ಲಿದ್ದ ಆ ವಿದ್ಯಾರ್ಥಿ ಶೆಲ್ ದಾಳಿಯಲ್ಲಿ ಅಸುನೀಗಿದ್ದಾರೆಂಬ ಸುದ್ದಿ ಶಿವರಾತ್ರಿ ದಿನ ಬರಸಿಡಿಲಿನಂತೆ ಅಪ್ಪಳಿಸಿದೆ.

ಕೇಂದ್ರ ಸರ್ಕಾರ ಉಕ್ರೇನ್​ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ರಕ್ಷಿಸುವ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಬೇಕು. ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವೂ ಮತ್ತಷ್ಟು ಕ್ಷಿಪ್ರವಾಗಿ ಕೆಲಸ ಮಾಡಬೇಕು. ಇನ್ನೊಂದು ಜೀವ ಹೋಗಲು ಬಿಡಬಾರದು. ಉಕ್ರೇನ್ ಭಾರತೀಯ ರಾಯಭಾರ ಕಚೇರಿ ಸೂಕ್ತವಾಗಿ ಸ್ಪಂದಿಸುತ್ತಿಲ್ಲವೆಂಬ ಆರೋಪವೂ ಕೇಳಿಬರುತ್ತಿದೆ. ವಿದ್ಯಾರ್ಥಿ ನವೀನ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಮಗನನ್ನು ಕಳೆದುಕೊಂಡು ಅತೀವ ದುಃಖದಲ್ಲಿರುವ ಅವರ ಪೋಷಕರಿಗೆ ನನ್ನ ಸಂತಾಪಗಳು. ನವೀನ್ ಅವರ ಪಾರ್ಥೀವ ಶರೀರವನ್ನು ಆದಷ್ಟು ಬೇಗ ಅವರ ಕುಟುಂಬಕ್ಕೆ ತಲುಪಿಸುವ ಕೆಲಸ ಸರ್ಕಾರದಿಂದ ಆಗಬೇಕು ಎಂದು ಹೆಚ್​ಡಿಕೆ ಹೇಳಿದ್ದಾರೆ.

ಇದನ್ನೂ ಓದಿ:ಉಕ್ರೇನ್‌ನಲ್ಲಿ ಹಾವೇರಿ ವಿದ್ಯಾರ್ಥಿ ಸಾವಿನ ಬಗ್ಗೆ ಪ್ರತಿಕ್ರಿಯಿಸುವಾಗ ಭಾವುಕರಾದ ಸಿಎಂ

ABOUT THE AUTHOR

...view details