ಕರ್ನಾಟಕ

karnataka

ETV Bharat / state

'ಕೊಲೆಗಡುಕ ಸರ್ಕಾರ...': ನೆಲಮಂಗಲ ಕುಟುಂಬ ಆತ್ಮಹತ್ಯೆ ಪ್ರಕರಣಕ್ಕೆ ಹೆಚ್​ಡಿಕೆ ಆಕ್ರೋಶ - ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಟ್ವೀಟ್​

ಎಲ್ಲಾ ದುಂದುವೆಚ್ಚ, ಲೂಟಿ ನಿಲ್ಲಿಸಿ ಸರ್ಕಾರ ಸಾರಿಗೆ ನೌಕರನ ಕುಟುಂಬದ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ‌ ಎಂದು ಹೆಚ್​ಡಿಕೆ ಆರೋಪಿಸಿದ್ದಾರೆ.

h-d-kumaraswamy-tweet-on-nelamangala-suicide-case
ನೆಲಮಂಗಲ ಕುಟುಂಬ ಆತ್ಮಹತ್ಯೆ ಪ್ರಕರಣ ಸಂಬಂಧ ಆಕ್ರೋಶ, ಕೊಲೆಗಡುಕ ಸರ್ಕಾರ ಎಂದ ಹೆಚ್​ಡಿಕೆ

By

Published : Oct 3, 2021, 11:03 AM IST

ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ, ಮಕ್ಕಳ ಆತ್ಮಹತ್ಯೆಯನ್ನು ಸರ್ಕಾರ ತಡೆಯಬಹುದಿತ್ತು. ಇದು ಕೊಲೆಗಡುಕ ಸರ್ಕಾರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರ್ಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ‌ ಎಂದು ಮಾಜಿ ಸಿಎಂ ಆರೋಪಿಸಿದ್ದಾರೆ.

ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನಹರಿಸಿ ಕೊರೊನಾ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೆರವಾಗಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ಸಿಎಂ ಬೊಮ್ಮಾಯಿ ಅವರನ್ನು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ದಲಿತರನ್ನು ಕೊಂದಾಗ ಒಂದು ಮಾತೂ ಆಡದಿದ್ದರೆ ಅದು ಆಡಳಿತವೇ?: ಕಪಿಲ್ ಸಿಬಲ್

ABOUT THE AUTHOR

...view details