ಕರ್ನಾಟಕ

karnataka

ETV Bharat / state

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ; ಹೆಚ್​ಡಿಕೆ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಹಣ ಸಂಗ್ರಹ ಮಾಡಲಾಗುತ್ತಿದ್ದು, ಇದೇ ವಿಷಯವನ್ನಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಹೆಚ್​​ಡಿಕೆ ವಾಗ್ದಾಳಿ ನಡೆಸಿದ್ದಾರೆ.

H D Kumaraswamy
H D Kumaraswamy

By

Published : Feb 15, 2021, 6:42 PM IST

ಬೆಂಗಳೂರು: ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್ ಮೂಲಕ ಆರ್​​ಎಸ್​ಎಸ್ ವಿರುದ್ಧ ವಾಗ್ದಾಳಿ ನಡೆಸಿರುವ ಹೆಚ್​ಡಿಕೆ, ಜರ್ಮನಿಯ ನಾಜಿ ರೀತಿಯ ನೀತಿ ಅನುಸರಣೆ ಮಾಡುತ್ತಿದೆ ಎಂದಿದ್ದಾರೆ.

ಓದಿ: ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಸಚಿವ ಕತ್ತಿ ಅವರ ಹೇಳಿಕೆ ಕುರಿತು ಸಿಎಂ ಹೇಳಿದ್ದಿಷ್ಟೇ..

ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರೆಸ್ಸೆಸ್ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. ಆರೆಸ್ಸೆಸ್‌ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ. ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ. ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದು ಅಘೋಷಿತ ತುರ್ತು ಪರಿಸ್ಥಿತಿ.

ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ. ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ಅನೇಕರು ದಾನ ನೀಡಿದ್ದು, ಒಟ್ಟು ಹಣ 1,511 ಕೋಟಿ ರೂ ಆಗಿದೆ.

ABOUT THE AUTHOR

...view details