ಕರ್ನಾಟಕ

karnataka

ETV Bharat / state

ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆ... ಪ್ರಧಾನಿಯವರಿಗೆ ಸಿದ್ಧಗಂಗಾ ಜ್ಞಾನೋದಯ ಮಾಡಿಸಿರಬಹುದು: ಹೆಚ್.ಡಿ.ಕೆ ವ್ಯಂಗ್ಯ - ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೆಚ್​ಡಿಕೆ ಟ್ವೀಟ್

ಕೇಂದ್ರ ಸರ್ಕಾರ ಅಳೆದು ತೂಗಿ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಕೊಟ್ಟಿದೆ. ಬಹುಶಃ ಶ್ರೀ ಶಿವಕುಮಾರ ಶ್ರೀಗಳು ಮೆಟ್ಟಿದ ಭೂಮಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜ್ಞಾನೋದಯ ಮಾಡಿಸಿರಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

h d kumaraswamy tweet
ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್

By

Published : Jan 6, 2020, 9:20 PM IST

ಬೆಂಗಳೂರು: ಕೇಂದ್ರ ಸರ್ಕಾರ ಅಳೆದು ತೂಗಿ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಕೊಟ್ಟಿದೆ. ಬಹುಶಃ ಶ್ರೀ ಶಿವಕುಮಾರ ಶ್ರೀಗಳು ಮೆಟ್ಟಿದ ಭೂಮಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜ್ಞಾನೋದಯ ಮಾಡಿಸಿರಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿ ಮೋದಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. ನೆರೆ ಪರಿಹಾರವಲ್ಲದೆ ರಾಜ್ಯಕ್ಕೆ ನ್ಯಾಯೋಚಿತವಾಗಿ ಬರಬೇಕಾದ ಅನುದಾನ ಸಾಕಷ್ಟಿದೆ. ತೆರಿಗೆ ಪಾಲು, ನರೇಗಾ ಅನುದಾನ, ಬರ ಪರಿಹಾರ ಇವುಗಳನ್ನೆಲ್ಲ ಯಾವಾಗ ಕೊಡುತ್ತೀರಿ ಮೋದಿಯವರೇ ಎಂದು ಪ್ರಶ್ನಿಸಿದ್ದಾರೆ.

ABOUT THE AUTHOR

...view details