ಬೆಂಗಳೂರು: ಹಿರಿಯ ಸಾಹಿತಿ ಡಾ. ಎಲ್.ಎಸ್ ಶೇಷಗಿರಿ ರಾವ್ ಅವರ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಲ್.ಎಸ್ ಶೇಷಗಿರಿ ರಾಯರ ನಿಧನಕ್ಕೆ ಹೆಚ್ ಡಿಕೆ, ಡಿಕೆಶಿ ಸಂತಾಪ
ಹಿರಿಯ ಸಾಹಿತಿ ಡಾ. ಎಲ್.ಎಸ್ ಶೇಷಗಿರಿ ರಾವ್ ಅವರ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಲ್ಎಸ್ಎಸ್ ಎಂದೇ ಖ್ಯಾತರಾಗಿದ್ದ ಶೇಷಗಿರಿ ರಾಯರು ಸಣ್ಣಕತೆ, ಮಕ್ಕಳ ಸಾಹಿತ್ಯ, ವಿಮರ್ಶೆ ಹಾಗೂ ನಿಘಂಟು ಕರ್ತೃವಾಗಿ ಕನ್ನಡ ಭಾಷೆ, ಸಾಹಿತ್ಯಕ್ಕೆ ಭಾರೀ ಕೊಡುಗೆ ನೀಡಿದ್ದಾರೆ, ಷೇಕ್ಸ್ಪಿಯರ್ ನಾಟಕಗಳನ್ನು ಕನ್ನಡಕ್ಕೆ ತಂದ ಹೆಗ್ಗಳಿಕೆ ಅವರದ್ದು, ಭಾವಾನುವಾದದಲ್ಲಿ ಅವರಿಗೆ ಅವರೇ ಸರಿಸಾಟಿ, ಸರಳತೆ, ಸಜ್ಜನಿಕೆಯೇ ಮೂರ್ತಿವೆತ್ತಂತಿದ್ದ ಶೇಷಗಿರಿರಾಯರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಭಾರೀ ನಷ್ಟವಾಗಿದೆ ಎಂದು ಡಿ.ಕೆ. ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ.
"ಕನ್ನಡಿಗರೇ ಭಾರತದಲ್ಲಿ ಎರಡನೇ ದರ್ಜೆಯ ಪ್ರಜೆಗಳಾಗಲು ಯಾವ ಕಾರಣಕ್ಕೂ ಒಪ್ಪಬೇಡಿ" ಎಂದಿದ್ದ ಕನ್ನಡ ಸಾಹಿತ್ಯದ ಸಾಕ್ಷಿ ಪ್ರಜ್ಞೆ ಪ್ರೊ. ಎಲ್.ಎಸ್ ಶೇಷಗಿರಿರಾವ್ ಅವರು ಇಂದು ನಮ್ಮೆಲ್ಲರನ್ನು ಅಗಲಿದ್ದಾರೆ ಎನ್ನುವ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ, ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.