ಕರ್ನಾಟಕ

karnataka

ETV Bharat / state

ಮಾಜಿ ಪ್ರಧಾನಿ ಸೋಲು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ವಿಶ್ವನಾಥ್ ನಿರ್ಧಾರ..?

ಮಂಡ್ಯದಲ್ಲಿ ನಿಖಿಲ್​ ಕುಮಾರಸ್ವಾಮಿ ಹಾಗೂ ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಸೋಲನುಭವಿಸಿದ್ದು, ಈ ನೈತಿಕ ಹೊಣೆ ತಾವೇ ಹೊತ್ತುಕೊಳ್ಳುವುದಾಗಿ ತಿಳಿಸಿರುವ​ ಹೆಚ್. ವಿಶ್ವನಾಥ್, ಜೆಡಿಎಸ್​ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ಸಂಗ್ರಹ ಚಿತ್ರ

By

Published : May 24, 2019, 9:44 AM IST

ಬೆಂಗಳೂರು :ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ತುಮಕೂರು ಕ್ಷೇತ್ರದಲ್ಲಿ ಸೋಲನುಭವಿಸಿದ ನೈತಿಕ ಹೊಣೆ ಹೊತ್ತು ಜೆಡಿಎಸ್​ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಹೆಚ್. ವಿಶ್ವನಾಥ್ ನಿರ್ಧರಿಸಿದ್ದಾರೆ.

ಚುನಾವಣೆಯಲ್ಲಿ ಜೆಡಿಎಸ್​ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದಿರುವುದಕ್ಕೆ ಹೊಣೆ ಹೊತ್ತು ರಾಜೀನಾಮೆ ನೀಡುವ ಇಂಗಿತವನ್ನು ವಿಶ್ವನಾಥ್ ಅವರು ಮಾಜಿ ಪ್ರಧಾನಿ ದೇವೇಗೌಡರ ಬಳಿ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ತಮ್ಮನ್ನು ವಿಶ್ವಾಸಕ್ಕೆ ತಗೆದುಕೊಳ್ಳದಿರುವ ಬಗ್ಗೆ ವಿಶ್ವನಾಥ್ ಅವರಿಗೆ ಬೇಸರ ಇತ್ತು. ಈಗ ಚುನಾವಣೆಯಲ್ಲಿ ಸಹ ಪಕ್ಷದ ಅಭ್ಯರ್ಥಿಗಳು ಗೆಲ್ಲದಿರುವುದಕ್ಕೆ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಲು ಮುಂದಾಗಿದ್ದಾರೆ

ABOUT THE AUTHOR

...view details