ಬೆಂಗಳೂರು:ಬಿಜೆಪಿಯ ಹಿರಿಯ ಮುಖಂಡ ಹೆಚ್.ವಿಶ್ವನಾಥ್ ಅವರ ಮುಂದಿನ ರಾಜಕೀಯ ನಡೆ ಕುತೂಹಲಕ್ಕೆ ಕಾರಣವಾಗಿದೆ. ಇಂದು ಸದಾಶಿವನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎನ್ನಲಾಗುತ್ತಿದೆ.
ಡಿಕೆಶಿ ಭೇಟಿ ಮಾಡಿದ 'ಹಳ್ಳಿಹಕ್ಕಿ' ಸ್ವಲ್ಪಹೊತ್ತು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಈಗಾಗಲೇ ಬಿಜೆಪಿಯಿಂದ ಮುನಿಸಿಕೊಂಡಿರುವ ಹೆಚ್.ವಿಶ್ವನಾಥ್ ಬಿಜೆಪಿ ನಾಯಕರಿಂದ ಅಂತರ ಕಾಯ್ದುಕೊಂಡಿದ್ದಾರೆ.