ಬೆಂಗಳೂರು: ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಮಾಜಿ ಮಂತ್ರಿ ಹೆಚ್ ವಿಶ್ವನಾಥ್ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ತಮ್ಮ ಸಮುದಾಯದಿಂದ ಒತ್ತಡ ಹೇರುವ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ. ಕುರುಬ ಸಮುದಾಯದ ಪ್ರಮುಖ ನಾಯಕರು, ಮುಖಂಡರ ಜೊತೆ ಸಭೆ ನಡೆಸಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಕುರುಬ ಸಮುದಾಯದ ಶಕ್ತಿ ಪ್ರದರ್ಶನ ಮಾಡುವ ಮೂಲಕ ಸಚಿವ ಸ್ಥಾನ ಪಡೆಯುವ ಯತ್ನಕ್ಕೆ ಕೈ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಕ್ಟೋಬರ್ 2ರಂದು ಕುರುಬ ಸಮಾಜದ ಸಮಾರಾಂಭ ನಡೆಯಲಿದೆ. ಆ ಮೂಲಕ ತಮ್ಮ ಶಕ್ತಿ ಪ್ರದರ್ಶನಕ್ಕೆ ವಿಶ್ವನಾಥ್ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಶೆಫರ್ಡ್ ಇಂಡಿಯಾ ಇಂಟರ್ನ್ಯಾಷನಲ್ನ ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ. ಇದರಲ್ಲಿ ರಾಜ್ಯದ, ದೇಶದ, ವಿದೇಶದಲ್ಲಿ ನೆಲೆಸಿರುವ ಕುರುಬ ಸಮುದಾಯದ ಮುಖಂಡರು, ನಾಯಕರು ಪಾಲ್ಗೊಳ್ಳಲಿದ್ದಾರೆ.