ಬೆಂಗಳೂರು: ಯುವತಿಯ ವಿಚಾರಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಆರೋಪಿಗಳಾದ ನಯೀಮ್, ಮೋಹಿನ್, ವಸೀಮ್ ಎಂಬಾತನನ್ನು ಘಟನೆ ನಡೆದ 8 ಗಂಟೆಯೊಳಗೆ ಹೆಚ್ಎಎಲ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆಯಾದ ಲಿಖಿತ್ ಮತ್ತು ಅರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನೆಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಲಿಖಿತ್ ಈ ಮೊದಲು ಸಿದ್ದಿಕ್ ಎಂಬಾತನ ಬಳಿ ಸಾಲ ಪಡೆದಿದ್ದ. ಹಣ ವಾಪಸ್ ಕೇಳಿದಾಗ ಕೊಡದೆ ಅವಾಚ್ಯ ಪದಗಳಿಂದ ನಿಂದಿಸಿದ್ದ. ಅಲ್ಲದೆ ಈ ಕುರಿತು ಮಾತನಾಡಲು ಆರೋಪಿಗಳಿಗೆ ಲಿಖಿತ್ ಕರೆ ಮಾಡಿದ್ದ. ಇದಕ್ಕೆ ಆರೋಪಿಗಳು ಅವರೂ ಕೂಡ ಒಪ್ಪಿದ್ದರು.
ಮಾತುಕತೆಗೆ ಬರುವಾಗ ಲಿಖಿತ್ ಜತೆ ನವೀನ್ ಮತ್ತು ಕದಿರೇಶ್ ಎಂಬುವರು ಬಂದಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ತಿರುಗಿ ಲಿಖಿತ್ನನ್ನು ಡ್ರ್ಯಾಗರ್ನಿಂದ ಇರಿದು ಆರೋಪಿಗಳು ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.