ಬೆಂಗಳೂರು :ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಅವರು ಕ್ಷೇತ್ರದಲ್ಲಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಹಲವು ನಾಯಕರನ್ನ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಸೋತಲ್ಲೇ ಗೆಲ್ಲುವ ಹಠ.. ಬೆಂಗಳೂರು ದ. ಕ್ಷೇತ್ರದಲ್ಲಿ ಹರಿಪ್ರಸಾದ್ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ - undefined
ಬೆಳಗ್ಗೆ ಜಯನಗರದ ಬಿಬಿಎಂಪಿ ಕಚೇರಿಯಲ್ಲಿ ಹರಿಪ್ರಸಾದ್ ನಾಮಪತ್ರ ಸಲ್ಲಿಕೆ. ಕ್ಷೇತ್ರದ ಹಲವು ನಾಯಕರನ್ನ ಭೇಟಿ ಮಾಡಿ ನಾಮಪತ್ರ ಸಲ್ಲಿಕೆ ವೇಳೆ ಸಾಥ್ ನೀಡವಂತೆ ಮನವಿ.
ನಿನ್ನೆ ದಿನವಿಡೀ ಕ್ಷೇತ್ರ ವ್ಯಾಪ್ತಿಯ ಮುಖಂಡರಾದ ಶಾಸಕ ಎಂ. ಕೃಷ್ಣಪ್ಪ, ಮಾಜಿ ಶಾಸಕ ಆರ್.ವಿ. ದೇವರಾಜ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಇಂದು ನಾಮಪತ್ರ ಸಲ್ಲಿಕೆಗೆ ಬರುವಂತೆ ಮನವಿ ಮಾಡಿದರು.
1999ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿ.ಕೆ. ಹರಿಪ್ರಸಾದ್ ಅಂದು ಅನಂತ್‍ಕುಮಾರ್ ವಿರುದ್ಧ ಸೋಲನುಭವಿಸಿದ್ದರು. ಆದರೆ, ಈಗ ಮರಳಿ ಅವಕಾಶ ಪಡೆದಿದ್ದಾರೆ. ಆದರೆ, ಅನಂತ್‍ಕುಮಾರ್ ನಿಧನ ಹಿನ್ನೆಲೆಯಲ್ಲಿ ಅವರ ಪತ್ನಿ ತೇಜಸ್ವಿನಿ ಅನಂತ್‍ಕುಮಾರ್ ಅಭ್ಯರ್ಥಿಯಾಗುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. ಈಗ ಬಿಜೆಪಿಯಿಂದ ತೇಜಸ್ವಿ ಸೂರ್ಯ ಅವರಿಗೆ ಟಕೆಟ್ ನೀಡಲಾಗಿದೆ. ಹರಿಪ್ರಸಾದ್ ಅವರು ಇವತ್ತು ಬೆಳಗ್ಗೆ ಜಯನಗರದ ಬಿಬಿಎಂಪಿ ದಕ್ಷಿಣ ವಲಯ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.