ಬೆಂಗಳೂರು:ರಾಜ್ಯ ಸರ್ಕಾರದ ಕೋವಿಡ್ ವಿರುದ್ಧದ ಹೋರಾಟಕ್ಕೆ ಸಾಥ್ ನೀಡಿರುವ ಹಟ್ಟಿ ಚಿನ್ನದ ಗಣಿ ಕಂಪನಿ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ ನೀಡಿದೆ.
ಕೋವಿಡ್ ಪರಿಹಾರ ನಿಧಿಗೆ ಹಟ್ಟಿ ಚಿನ್ನದ ಗಣಿ ಕಂಪನಿಯಿಂದ 5 ಕೋಟಿ ರೂ.ದೇಣಿಗೆ - ಕೋವಿಡ್ ಪರಿಹಾರನಿಧಿಗೆ ದೇಣಿಗೆ
ಹಟ್ಟಿ ಚಿನ್ನದ ಗಣಿ ಕಂಪನಿ ವತಿಯಿಂದ ಕೋವಿಡ್ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಕೋವಿಡ್ ಪರಿಹಾರ ನಿಧಿಗೆ ಹಟ್ಟಿ ಚಿನ್ನದ ಗಣಿ ಕಂಪನಿಯಿಂದ ದೇಣಿಗೆ
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ, ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಹಾಗೂ ಹಟ್ಟಿ ಚಿನ್ನದ ಗಣಿ ವ್ಯವಸ್ಥಾಪಕ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ ಆಗಮಿಸಿದರು.
ಈ ವೇಳೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ 5 ಕೋಟಿ ರೂ. ದೇಣಿಗೆ ಚೆಕ್ ಅನ್ನು ಹಸ್ತಾಂತರಿಸಿದರು.