ಕರ್ನಾಟಕ

karnataka

ಕರ್ನಾಟಕ ಶಿಕ್ಷಣ ಕಾಯಿದೆಯ ಕೆಲವು ಸೆಕ್ಷನ್‌ ಅಸಾಂವಿಧಾನಿಕ ಎಂದು ಪ್ರಕಟಿಸಿದ ಹೈಕೋರ್ಟ್: ಸರ್ಕಾರಕ್ಕೆ ತೀವ್ರ ಹಿನ್ನಡೆ

By

Published : Jan 6, 2023, 4:50 PM IST

Updated : Jan 6, 2023, 4:59 PM IST

ಕರ್ನಾಟಕ ಶಿಕ್ಷಣ ಕಾಯಿದೆ 1983ರ ಸೆಕ್ಷನ್ 48 ಅಸಾಂವಿಧಾನಿಕ ಎಂದು ಹೈಕೋರ್ಟ್ ಪ್ರಕಟಿಸಿದೆ. ಉಚ್ಛ ನ್ಯಾಯಾಲಯದ ನ್ಯಾ. ಇ.ಎಸ್. ಇಂದಿರೇಶ್ ಅವರಿದ್ದ ನ್ಯಾಯಪೀಠವು ಈ ಆದೇಶ ಹೊರಡಿಸಿದೆ.

hc-declared-some-sections-of-karnataka-education-act-unconstitutional
ಕರ್ನಾಟಕ ಶಿಕ್ಷಣ ಕಾಯಿದೆಯ ಕೆಲವು ಸೆಕ್ಷನ್‌ ಅಸಾಂವಿಧಾನಿಕ ಎಂದು ಪ್ರಕಟಿಸಿದ ಹೈಕೋರ್ಟ್

ಬೆಂಗಳೂರು :ಖಾಸಗಿ ಅನುದಾನ ರಹಿತ ಶಾಲೆಗಳು ರಾಜ್ಯ ಸರ್ಕಾರ ನಿಗದಿ ಪಡಿಸಿದ ರೀತಿಯಲ್ಲಿ ಹೊರತುಪಡಿಸಿ ಇತರ ಕಾರಣಗಳಿಗೆ ಶುಲ್ಕ ಪಡೆಯುವುದನ್ನು ನಿಷೇಧಿಸುವ ಕರ್ನಾಟಕ ಶಿಕ್ಷಣ ಕಾಯಿದೆ 1983ರ ಸೆಕ್ಷನ್ 48ನ್ನು ಹೈಕೋರ್ಟ್ ಅಸಾಂವಿಧಾನಿಕ ಎಂದು ಪ್ರಕಟಿಸಿದೆ. ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಸೇರಿದಂತೆ ಮತ್ತಿತರ ಶಾಲಾ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಇ. ಎಸ್. ಇಂದಿರೇಶ್ ಅವರಿದ್ದ ನ್ಯಾಯಪೀಠವು ಈ ಆದೇಶ ನೀಡಿದೆ.

ಇದರಿಂದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಶುಲ್ಕ ವಿಧಿಸುವುದನ್ನು ನಿಯಂತ್ರಿಸುವುದಕ್ಕೆ ಸರ್ಕಾರಕ್ಕೆ ಇದ್ದ ಅಧಿಕಾರ ರದ್ದಾದಂತಾಗಿದೆ. ಜೊತೆಗೆ, ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಣೆ ಮತ್ತು ಸರುರಕ್ಷತೆ ಕಾಪಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಖಾಸಗಿ ಅನುದಾನರಹಿತ ಶಾಲೆಗಳು ಮತ್ತು ಅದರ ಉದ್ಯೋಗಿಗಳಿಂದ ಮೇಲೆ ಕ್ರಮ ಕೈಗೊಳ್ಳಬಹುದಾದ ಸೆಕ್ಷನ್ 5ಎ, ಅನುದಾನ ರಹಿತ ಶಾಲೆಗಳನ್ನು ನಿಯಂತ್ರಿಸುವ ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ (ಡಿಇಆರ್‌ಎ) ಕ್ಕೆ ಅಧಿಕಾರ ಒದಗಿಸುವ ಸೆಕ್ಷನ್ 2 (11) ( ಎ), ನಿಗದಿಗಿಂತಲೂ ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಯಂತ್ರಿಸುವ ಸೆಕ್ಷನ್ 48ರ ಉಲ್ಲಂಘನೆ ಮಾಡುವ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ 10 ಲಕ್ಷ ರೂಪಾಯಿವರೆಗೂ ದಂಡ ವಿಧಿಸುವುದಕ್ಕೆ ಅವಕಾಶ ನೀಡುವ ಸೆಕ್ಷನ್ 124ಎ ಅನ್ನು ಅಸಾಂವಿಧಾನಿಕ ಎಂದು ತಿಳಿಸಿದೆ.

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಹಕ್ಕುಗಳ ಮೆಲೆ ಸುಪ್ರೀಂಕೋರ್ಟ್​​ ರೂಪಿಸಿರುವ ಪ್ರಕಾರ ಕರ್ನಾಟಕ ಶಿಕ್ಷಣ ಕಾಯಿದೆ 1983ರ ಈ ಸೆಕ್ಷನ್‌ಗಳು ಸಂವಿಧಾನ ಪರಿಚ್ಛೇದ 14 (ಕಾನೂನಿನಲ್ಲಿ ಸಮಾನತೆ), ಪರಿಚ್ಛೇದ 19 (1) (ಜಿ) (ಕಾನೂನಿನ ಅಧೀನದಲ್ಲಿರುವ ಯಾವುದೇ ವೃತ್ತಿ, ಉದ್ಯೋಗ, ವ್ಯಾಪಾರ ಮತ್ತು ವ್ಯವಹಾರವನ್ನು ನಡೆಸುವ ಹಕ್ಕು) ಯ ಉಲ್ಲಂಘನೆ ಮಾಡಿದಂತಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಈಜಿಪುರದಲ್ಲಿ ಆರ್ಥಿಕ ಹಿಂದುಳಿದವರಿಗೆ ವಸತಿ ನಿರ್ಮಾಣ ವಿಳಂಬ: ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

ಅಲ್ಲದೇ, ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಲ್ಲಿ ಭಾಗಿಯಾದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸದಸ್ಯರು, ಸಿಬ್ಬಂದಿಗೆ ಆರು ತಿಂಗಳುಗಳ ಕಾಲ ಶಿಕ್ಷೆ ಮತ್ತು 1 ಲಕ್ಷದ ವರೆಗಗೂ ದಂಡ ವಿಧಿಸಬಹುದಾದ ಸೆಕ್ಷನ್ 112(ಎ) ಸಹಾ ಉಲ್ಲಂಘಿಸಿದಂತಾಗಿದೆ. ಅಲ್ಲದೆ, ಪೂರ್ವ ಪ್ರಾರ್ಥಮಿಕ ಅವಧಿಗೆ ಶುಲ್ಕ ವಿಧಿಸುವುದು ಮತ್ತು ವಿಶೇಷ ಅಭಿವೃದ್ಧಿ ಶುಲ್ಕ ಸಂಗ್ರಹಿಸುವುದನ್ನು ನಿಯಂತ್ರಿಸಬಹುದಾದ 1995 ಮತ್ತು 1999ರಲ್ಲಿ ಜಾರಿ ಮಾಡಿರುವ ನಿಯಮಗಳು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಈ ಹಿಂದೆಯೂ ಆದೇಶ ನೀಡಿದ್ದ ಹೈಕೋರ್ಟ್, ಕರ್ನಾಟಕ ಅನುದಾನ ರಹಿತ ಶಾಲೆಗಳ ನಿರ್ವಹಣಾ ಸಂಘ (ಕುಸ್ಮಾ)1995ರಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಆಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ಪೀಠ, 2022ರ ಡಿಸೆಂಬರ್ 1ರಂದು ಕರ್ನಾಟಕ ಶಿಕ್ಷಣ ಕಾಯಿದೆ 1983ರ ಹಲವು ಸೆಕ್ಷನ್‌ಗಳನ್ನು ಅಸಾಂವಿಧಾನಿಕ ಎಂಬುದಾಗಿ ಪ್ರಕಟಿಸಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಇದನ್ನೂ ಓದಿ:ಮೈಸೂರು: ಪತ್ನಿ ಸಾವಿಗೆ ಪ್ರಚೋದನೆ, ಗಂಡನಿಗೆ 7 ವರ್ಷ ಜೈಲು ಸಜೆ

Last Updated : Jan 6, 2023, 4:59 PM IST

ABOUT THE AUTHOR

...view details