ಬೆಂಗಳೂರು: ಲೋಕಾಯುಕ್ತ ಸಂಸ್ಥೆ ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿ ಆದೇಶ ಹೊರಡಿಸಿದೆ.
ಲೋಕಾಯುಕ್ತ ಸಂಸ್ಥೆ ದುರ್ಬಳಕೆ ಆರೋಪ, ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾ
ಲೋಕಾಯುಕ್ತ ಸಂಸ್ಥೆ ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿ ಆದೇಶ ಹೊರಡಿಸಿದೆ.
ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಇನ್ನು ಪ್ರಕರಣ ಸಂಬಂಧ ಈಗಾಗಲೇ ತನಿಖೆ ನಡೆದು ಚಾರ್ಜ್ಶೀಟ್ ಹಂತಕ್ಕೆ ಬಂದಿದೆ. ಈ ಸಮಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟು ನ್ಯಾಯಾಲಯ ಅರ್ಜಿ ವಜಾಗೊಳಿಸಿತು.
ಲೋಕಾಯುಕ್ತ ಭ್ರಷ್ಟಾಚಾರ ರಾಜ್ಯದಲ್ಲಿ ಭಾರೀ ಸಂಚಲನವನ್ನುಂಟು ಮಾಡಿತ್ತು. ಇದರಲ್ಲಿ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಹಾಗೆ ಹಲವಾರು ಮಂದಿ ಭಾಗಿಯಾಗಿದ್ದರು. ಈ ಸಂಬಂಧ ಎಸ್ ಐಟಿ (ವಿಶೆಷ ತನಿಖಾ ತಂಡ)ತನಿಖೆ ನಡೆಸಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದರು. ಆರೋಪಿಗಳು ಜಾಮೀನು ಪಡೆದು ಸದ್ಯ ಹೊರಗಿದ್ದಾರೆ.