ಕರ್ನಾಟಕ

karnataka

ETV Bharat / state

ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ - ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ

ಆದಾಯ ಮೀರಿ ಆಸ್ತಿಗಳಿಕೆ ಆರೋಪದಲ್ಲಿ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.

ಹೈಕೋರ್ಟ್
ಹೈಕೋರ್ಟ್

By

Published : Apr 14, 2023, 6:46 AM IST

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೊರ್ಟ್ ವಿಸ್ತರಿಸಿದೆ. ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕನಕಪುರ ಶಾಸಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿ ಸಲ್ಲಿಸಿರುವ ಅರ್ಜಿಯನ್ನು, ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ, ತಡೆಯಾಜ್ಞೆ ವಿಸ್ತರಿಸಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಡಿ.ಕೆ.ಶಿವಕುಮಾರ್ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ತನಿಖೆಗೆ ಅವಕಾಶ ನೀಡಿರುವುದು ನಿಯಮ ಬಾಹೀರವಾಗಿದೆ. ಸರ್ಕಾರ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ರದ್ದು ಪಡಿಸಬೇಕು ಎಂದು ಕೋರಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸಿಬಿಐ ಪರ ವಕೀಲರು, ತಮ್ಮ ವಾದಕ್ಕೆ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

ಇದನ್ನೂ ಓದಿ:ಡಿ ಕೆ ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಪ್ರಕರಣದ ಹಿನ್ನೆಲೆ ಏನು?:ಭ್ರಷ್ಟಾಚಾರ ನಿಗ್ರಹ ಕಾಯ್ದೆ1988ರ ಕಲಂ 13 (2), 13 (1)(ಇ) ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣ ರದ್ದು ಪಡಿಸಬೇಕು ಎಂದು ಡಿಕೆಶಿ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವ ಕ್ರಮವನ್ನು ಪ್ರಶ್ನಿಸಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಎರಡೂ ಅರ್ಜಿಗಳನ್ನು ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ:ಶಾಸಕ ಸೋಮಶೇಖರ್ ರೆಡ್ಡಿಗೆ ಶಿಕ್ಷೆ ಆದೇಶಕ್ಕೆ ಹೈಕೋರ್ಟ್​ ತಡೆಯಾಜ್ಞೆ

ಸೋಮಶೇಖರ್ ರೆಡ್ಡಿ ಶಿಕ್ಷೆ ಆದೇಶಕ್ಕೆ ಹೈಕೋರ್ಟ್​ ತಡೆಯಾಜ್ಞೆ:ಪರವಾನಗಿ ನವೀಕರಿಸದೇ ರಿವಾಲ್ವರ್ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆ ಶಸ್ತ್ರಾಸ್ತ್ರ ಕಾಯ್ದೆಯಡಿ ಶಾಸಕ ಸೋಮಶೇಖರ್ ರೆಡ್ಡಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಆದೇಶವನ್ನ ಪ್ರಶ್ನಿಸಿ ಸೋಮಶೇಖರ್ ರೆಡ್ಡಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. 2009ರ ಡಿ.31ರಂದು ರಿವಾಲ್ವರ್ ಪರವಾನಗಿ ಅವಧಿ ಮುಕ್ತಾಯಗೊಂಡಿದ್ದರೂ 2011ರ ನ.10ರವರೆಗೆ ಪರವಾನಗಿ ನವೀಕರಿಸದೆ ಇರಿಸಿಕೊಂಡಿದ್ದ ಆರೋಪ ರೆಡ್ಡಿ ಮೇಲಿದೆ. ಬಳ್ಳಾರಿ ಜಿಲ್ಲಾಧಿಕಾರಿ ಅವರು 2013ರಲ್ಲಿ ಶಾಸಕ ಸೋಮಶೇಖರ್​ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇತ್ತೀಚೆಗೆ ಸೋಮಶೇಖರ್ ರೆಡ್ಡಿಗೆ ಶಿಕ್ಷೆ ವಿಧಿಸಿ ಆದೇಶ ಮಾಡಿತ್ತು.

ಇದನ್ನೂ ಓದಿ:ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಡಿಕೆಶಿ ವಿರುದ್ಧದ ಸಿಬಿಐ ತನಿಖೆಯ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ

ಇದನ್ನೂ ಓದಿ:ಕೊಡವರಿಗೆ ಪ್ರತ್ಯೇಕ ಸ್ಥಾನಮಾನ ನೀಡಲು ಸೂಚನೆ ನೀಡುವಂತೆ ಕೋರಿ ಪಿಐಎಲ್​

ABOUT THE AUTHOR

...view details