ಕರ್ನಾಟಕ

karnataka

ETV Bharat / state

ಕರ್ನಾಟಕ ಋಣ ಪರಿಹಾರ ಕಾಯ್ದೆ ಪ್ರಶ್ನಿಸಿ ಅರ್ಜಿ: ಗಿರವಿ ವ್ಯಾಪಾರಿಗಳಿಗೆ ಹೈಕೋರ್ಟ್​ನಿಂದ ರಿಲೀಫ್​

ಹಿಂದಿನ  ಸಮ್ಮಿಶ್ರ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಋಣ ಪರಿಹಾರ ಕಾಯ್ದೆಯನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ರಾಜ್ಯ ಜುವೆಲ್ಲರಿ ಫೆಡರೇಷನ್‌ (ಕೆಎಸ್‌ಜೆಎಫ್) ಪ್ರಧಾನ ಕಾರ್ಯದರ್ಶಿ ಡಾ. ಬಿ. ರಾಮಾಚಾರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗಿರವಿ ವ್ಯಾಪಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿದೆ.

ಗಿರಿವಿ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

By

Published : Sep 13, 2019, 9:43 AM IST

ಬೆಂಗಳೂರು: ಹಿಂದಿನ ಸಮ್ಮಿಶ್ರ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಋಣ ಪರಿಹಾರ ಕಾಯ್ದೆಯನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗಿರವಿ ವ್ಯಾಪಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿದೆ.

ರಾಜ್ಯ ಜುವೆಲ್ಲರಿ ಫೆಡರೇಷನ್‌ (ಕೆಎಸ್‌ಜೆಎಫ್) ಪ್ರಧಾನ ಕಾರ್ಯದರ್ಶಿ ಡಾ. ಬಿ. ರಾಮಾಚಾರಿ ಸಲ್ಲಿಸಿರುವ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿದ್ದ ನ್ಯಾಯಪೀಠ ಗಿರವಿ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳದಂತೆ ಆದೇಶ ನೀಡಿತು.

ಗಿರವಿ ವ್ಯಾಪಾರಿಗಳಿಗೆ ಹಾಗೂ ಲೇವಾದೇವಿದಾರರಿಗೆ ಸರ್ಕಾರವೇ ಕಾನೂನು ಪ್ರಕಾರ ಪರವಾನಗಿ ನೀಡಿದ್ದು, ತೆರಿಗೆಯನ್ನೂ ಸಂಗ್ರಹಿಸುತ್ತಿದೆ. ವಹಿವಾಟು ನಡೆಸಲು ಹಲವು ನಿಯಮಗಳನ್ನು ರೂಪಿಸಿರುವ ಸರ್ಕಾರ ವ್ಯವಸ್ಥಿತವಾಗಿ ಕಾನೂನು ಚೌಕಟ್ಟಿನಲ್ಲಿ ವ್ಯವಹರಿಸಲು ಅವಕಾಶ ಕಲ್ಪಿಸಿದೆ. ಹೀಗಿರುವಾಗ ಋಣ ಪರಿಹಾರ ಕಾಯ್ದೆ ಜಾರಿಗೆ ತರುವ ಮೂಲಕ ಗಿರವಿ ವ್ಯಾಪಾರಿಗಳಿಗೆ ನಷ್ಟ ಉಂಟು ಮಾಡುತ್ತಿರುವುದು ಸರಿಯಲ್ಲ. ರೈತರ ಸಾಲಮನ್ನಾ ಮಾಡಿದ ಸರ್ಕಾರ, ಬ್ಯಾಂಕ್‌ಗಳಿಗೆ ಹಣ ಮರು ಪಾವತಿಸಿದೆ. ಗಿರವಿ ವ್ಯಾಪಾರಿಗಳು ಮತ್ತು ಲೇವಾದೇವಿದಾರರಿಂದ ಪಡೆದ ಸಾಲ ಮನ್ನಾ ಮಾಡಿರುವ ಸರಕಾರ ಇವರಿಗೆ ಯಾವುದೇ ರೀತಿಯ ಪರಿಹಾರ ನೀಡಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ABOUT THE AUTHOR

...view details