ಕರ್ನಾಟಕ

karnataka

ETV Bharat / state

ಮಂಗಳೂರು ವಿಮಾನ ನಿಲ್ದಾಣ ನಿರ್ವಹಣೆ ಅದಾನಿ ಗ್ರೂಪ್​ಗೆ ಹಸ್ತಾಂತರ ಪ್ರಶ್ನಿಸಿ ಪಿಐಎಲ್ : ಅರ್ಜಿ ವಜಾ - Mangalore Airport Management

ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆ, ಕಾರ್ಯಾಚರಣೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಖಾಸಗಿ ಸಹಭಾಗಿತ್ವದ ಯೋಜನೆ ಅಡಿ ಅದಾನಿ ಎಂಟರ್ ಪ್ರೈಸಸ್​ಗೆ ಹಸ್ತಾಂತರಿಸುವ ಕುರಿತು 2019ರ ಮಾರ್ಚ್ 3ರಂದು ಒಪ್ಪಿಗೆ ನೀಡಿದೆ..

hc-rejects-challenge-to-handing-over-of-mangalore-airport-management-to-adani-group
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ

By

Published : Sep 15, 2021, 6:25 PM IST

ಬೆಂಗಳೂರು :ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ, ಕಾರ್ಯಾಚರಣೆ ಮತ್ತು ಅಭಿವೃದ್ಧಿ ಹೊಣೆಯನ್ನು ಅದಾನಿ ಎಂಟರ್ ಪ್ರೈಸೆಸ್ ಲಿಮಿಟೆಡ್ ಗೆ ಹಸ್ತಾಂತರಿಸುವ ಕೇಂದ್ರ ಸರ್ಕಾರದ ನಿರ್ಣಯದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದಿರುವ ಹೈಕೋರ್ಟ್ ಈ ಸಂಬಂಧ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದೆ.

ವಿಮಾನ ನಿಲ್ದಾಣವನ್ನು ಖಾಸಗಿಯವರಿಗೆ ಹಸ್ತಾಂತರಿಸದಂತೆ ಕೋರಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ಸೆ.2ರಂದು ವಿಚಾರಣೆ ಪೂರ್ಣಗೊಳಿಸಿತ್ತು.

ಆ ತೀರ್ಪನ್ನು ಇಂದು ಪ್ರಕಟಿಸಿದ ವಿಭಾಗೀಯ ಪೀಠ, ವಿಮಾನ ನಿಲ್ದಾಣವನ್ನು ಖಾಸಗಿಯವರಿಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಣಯ ಕೈಗೊಂಡಿದೆ. ಈ ಹಿಂದೆ ತಿರುವನಂತಪುರ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಗ್ರೂಪ್ ಗೆ ಲೀಸ್ ಮೂಲಕ ಹಸ್ತಾಂತರಿಸಿದ್ದನ್ನು ಪ್ರಶ್ನಿಸಿ ಅಲ್ಲಿನ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.

ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರದ ನೀತಿ ನಿರ್ಣಯದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ ಅರ್ಜಿ ವಜಾಗೊಳಿಸಿತ್ತು. ಮಂಗಳೂರು ವಿಮಾನ ನಿಲ್ದಾಣ ಹಸ್ತಾಂತರ ವಿಚಾರ ಕೇಂದ್ರ ಸರ್ಕಾರದ ನೀತಿ ನಿರ್ಣಯಕ್ಕೆ ಸೇರಿದ್ದಾಗಿದೆ. ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿ ಆದೇಶಿಸಿತು.

ಅರ್ಜಿದಾರರ ಕೋರಿಕೆ:ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆ, ಕಾರ್ಯಾಚರಣೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಖಾಸಗಿ ಸಹಭಾಗಿತ್ವದ ಯೋಜನೆ ಅಡಿ ಅದಾನಿ ಎಂಟರ್ ಪ್ರೈಸಸ್​ಗೆ ಹಸ್ತಾಂತರಿಸುವ ಕುರಿತು 2019ರ ಮಾರ್ಚ್ 3ರಂದು ಒಪ್ಪಿಗೆ ನೀಡಿದೆ.

ಇದು ಸರಿಯಾದ ಕ್ರಮವಲ್ಲ. ಏಕಪಕ್ಷೀಯ ನಿರ್ಧಾರ. ಹೀಗಾಗಿ, ವಿಮಾನ ನಿಲ್ದಾಣವನ್ನು ಖಾಸಗಿಯರಿಗೆ ಹಸ್ತಾಂತರಿಸುವ ಒಪ್ಪಂದವನ್ನು ರದ್ದುಪಡಿಸಬೇಕು ಎಂದು ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಉದ್ಯೋಗಿಗಳ ಸಂಘ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಓದಿ:ಎತ್ತಿನಹೊಳೆ ಯೋಜನೆ ವಿಷಯ ಪ್ರಸ್ತಾಪ : ಸಚಿವ ಜೆ. ಸಿ ಮಾಧುಸ್ವಾಮಿ - ಡಾ. ಜಿ ಪರಮೇಶ್ವರ್ ನಡುವೆ ಮಾತಿನ ಚಕಮಕಿ

ABOUT THE AUTHOR

...view details