ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ನ್ಯಾಯಾಲಯಗಳ ಎಲ್ಲ ಕಾರ್ಯಗಳಲ್ಲಿ ಇರಿಸುವಂತೆ ಹೈಕೋರ್ಟ್ ಆದೇಶಿಸಿದೆ. ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ ಶಿವಶಂಕರೇಗೌಡ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಸುತ್ತೋಲೆಯಲ್ಲಿ, 2022ರ ಫೆಬ್ರವರಿ 4ರಂದು ಹೈಕೋರ್ಟ್ ಪೂರ್ಣ ಪೀಠವು ರಾಷ್ಟ್ರೀಯ ಹಬ್ಬಗಳಾದ ಗಣರಾಜ್ಯೋತ್ಸವ (ಜ.26), ಸ್ವಾತಂತ್ರ್ಯ ದಿನಾಚರಣೆ (ಆ.15) ಹಾಗೂ ಸಂವಿಧಾನ ದಿನಾಚರಣೆ (ನ.26) ಸೇರಿದಂತೆ ನ್ಯಾಯಾಲಯಗಳ ಅಧಿಕೃತ ಕಾರ್ಯಗಳಲ್ಲಿ ಭಾರತದ ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇರಿಸುವ ಕುರಿತು ನಿರ್ಣಯ ಕೈಗೊಂಡಿದೆ. ಅದರಂತೆ ಹೈಕೋರ್ಟ್ ಬೆಂಗಳೂರು ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠಗಳು ಒಳಗೊಂಡಂತೆ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಇರಿಸಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ:ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಆರೋಪ ಪ್ರಕರಣ: ನ್ಯಾಯಾಧೀಶರಿಂದ ವಿವರಣೆ ಕೇಳಿದ ಹೈಕೋರ್ಟ್