ಕರ್ನಾಟಕ

karnataka

ETV Bharat / state

ಬಿಎಂಟಿಸಿ ಹೊಸದಾಗಿ ಬಸ್ ಖರೀದಿ ಟೆಂಡರ್ ಪ್ರಶ್ನಿಸಿದ್ದ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬಿಎಂಟಿಸಿ ಹೊಸ ಬಸ್‌ ಖರೀದಿಗೆ ಹೊರಡಿಸಿದ್ದ ಟೆಂಡರ್ - ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​​​ - ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ

hc-sent-notice-to-state-and-central-govt-for-tender-for-the-purchase-of-bmtc-buses
ಬಿಎಂಟಿಸಿ ಹೊಸದಾಗಿ ಬಸ್ ಖರೀದಿ ಟೆಂಡರ್ ಪ್ರಶ್ನಿಸಿದ್ದ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

By

Published : Jan 2, 2023, 9:31 PM IST

ಬೆಂಗಳೂರು :ಬಿಎಂಟಿಸಿ 840 ಹೊಸ ಬಸ್‌ಗಳನ್ನು ಖರೀದಿಗೆ ಹೊರಡಿಸಿದ್ದ ಟೆಂಡರ್ ಅಧಿಸೂಚನೆ ಪ್ರಶ್ನಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದೆ.

ಸ್ವತಃ ವಿಕಲಚೇತನರಾಗಿರುವ ಬೆಂಗಳೂರಿನ ನಿವಾಸಿ ಸುನೀಲ್ ಕುಮಾರ್ ಜೈನ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರಿದ್ದ ವಿಭಾಗೀಯ ಪೀಠ, ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೆ, ವಿಚಾರಣೆಯನ್ನು ಮುಂದೂಡಿದೆ.

ಅರ್ಜಿಯಲ್ಲಿ ಪ್ರತಿವಾದಿಗಳಾದ ರಾಜ್ಯ ಸಾರಿಗೆ ಇಲಾಖೆ, ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ವಿಕಲಚೇತನರ ಸಬಲೀಕರಣ ಇಲಾಖೆ ಮತ್ತು ಬಿಎಂಟಿಸಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ಪ್ರಕರಣವೇನು ?: ಪೋಲಿಯೋ ಕಾರಣಕ್ಕೆ ಅಂಗವೈಕಲ್ಯಕ್ಕೆ ತುತ್ತಾಗಿರುವ ಅರ್ಜಿದಾರರು, ಓಡಾಟಕ್ಕಾಗಿ ಗಾಲಿ ಕುರ್ಚಿಯನ್ನು ಅವಲಂಬಿಸಿದ್ದಾರೆ. ಆದರೆ, 2022ರ ಅ.28ರಂದು ಬಿಎಂಟಿಸಿ 840 ಹೊಸ ಬಸ್‌ಗಳ ಖರೀದಿಗೆ ಟೆಂಡರ್ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆ ಮೂಲಕ ಖರೀದಿಸಲಿರುವ ಬಸ್​ಗಳಲ್ಲಿ ಚಾಸಿಸ್‌ನ (ತಳಕಟ್ಟು) ಎತ್ತರ, 1000 ಮಿ.ಮೀಟರ್ ಇರಬೇಕು ಎಂದು ಹೇಳಲಾಗಿದೆ. ಆದರೆ, ಅದು ಮೋಟಾರು ವಾಹನ ಕಾಯ್ದೆಯ ನಿಯಮಗಳಿಗೆ ವಿರುದ್ಧವಾಗಿದೆ. ಹಾಗಾಗಿ, ಖರೀದಿಸಲು ಉದ್ದೇಶಿಸಿರುವ ಬಸ್‌ಗಳ ಚಾಸಿಸ್‌ನ (ತಳಕಟ್ಟು) ಎತ್ತರ 1000 ಮಿಲಿ ಮೀಟರ್ ಇರಬೇಕು ಎನ್ನುವುದಕ್ಕೆ ಸೀಮಿತವಾಗಿ ಅಧಿಸೂಚನೆ ರದ್ದುಪಡಿಸಬೇಕು ಎಂದು ಕೋರಿದ್ದಾರೆ.

ಅಲ್ಲದೆ, ಬಸ್‌ನ ನೆಲಮಟ್ಟದಿಂದ ಎತ್ತರದ 400 ಮಿಲಿ ಮೀಟರ್‌ನಿಂದ 650 ಮಿ.ಮೀ ಇರುವ ಮತ್ತು ಬಾಗಿಲು ಮೂಲಕ ಗಾಲಿ ಕುರ್ಚಿಗಳಿಂದ ಹತ್ತಲು ಮತ್ತು ಇಳಿಯಲು ಅನುಕೂಲವಾಗುವಂತೆ ವ್ಯವಸ್ಥೆ ಇರುವ (ವ್ಹೀಲ್ ಚೇರ್ ಬೋಡಿಂಗ್ ಡಿವೈಸ್) ಬಸ್‌ಗಳನ್ನು ಖರೀದಿ ಮಾಡಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಈ ಮಧ್ಯೆ ಅರ್ಜಿ ನ್ಯಾಯಾಲಯದಲ್ಲಿ ಇತ್ಯರ್ಥವಾಗುವರೆಗೆ 840 ಹೊಸ ಬಸ್‌ಗಳ ಖರೀದಿಗೆ ಹೊರಡಿಸಿರುವ ಟೆಂಡರ್ ಅಧಿಸೂಚನೆಗೆ ತಡೆಯಾಜ್ಞೆ ನೀಡಬೇಕು. ಇಲ್ಲವೇ ಬಸ್ ಖರೀದಿ ಪ್ರಕ್ರಿಯು ಅರ್ಜಿ ಕುರಿತ ಅಂತಿಮ ಆದೇಶಕ್ಕೆ ಒಳಪಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ :ಆದೇಶಗಳು ಹೃದಯ ಬಡಿತದಂತೆ, ವಿವೇಚನಾರಹಿತವಾಗಿದ್ದಲ್ಲಿ ನಿರ್ಜೀವಗೊಳಿಸಿದಂತೆ: ಹೈಕೋರ್ಟ್​

ABOUT THE AUTHOR

...view details