ಬೆಂಗಳೂರು: ಲೈಸನ್ಸ್ ನವೀಕರಿಸದೇ ರಿವಾಲ್ವರ್ ಇರಿಸಿಕೊಂಡಿದ್ದ ಆರೋಪದ ಮೇಲೆ ಶಸ್ತ್ರಾಸ್ತ್ರ ಕಾಯ್ದೆ ಅಡಿ ಶಾಸಕ ಸೋಮಶೇಖರ್ ರೆಡ್ಡಿಗೆ ಶಿಕ್ಷೆಗೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ವಿಧಿಸಿದೆ.
ಶಾಸಕ ಸೋಮಶೇಖರ್ ರೆಡ್ಡಿಗೆ ಶಿಕ್ಷೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ - ಜನಪ್ರತಿನಿಧಿಗಳ ನ್ಯಾಯಾಲಯ
ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಶಾಸಕ ಸೋಮಶೇಖರ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಸೋಮಶೇಖರ್ ರೆಡ್ಡಿ ಮೇಲ್ಮನವಿ ಸಲ್ಲಿಸಿದ್ದರು. 2009ರ ಡಿ. 31ರಂದು ರಿವಾಲ್ವರ್ ಲೈಸನ್ಸ್ ಅವಧಿ ಮುಕ್ತಾಯವಾಗಿದ್ದರೂ 2011ರ ನ. 10ರವರೆಗೆ ಲೈಸೆನ್ಸ್ ನವೀಕರಿಸದೆ ಇಟ್ಟುಕೊಂಡಿದ್ದ ಆರೋಪ ರೆಡ್ಡಿ ಮೇಲಿದೆ. 2013ರಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಅವರು ಶಾಸಕ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದರು. ಇತ್ತೀಚೆಗೆ ವಿಶೇಷ ನ್ಯಾಯಾಲಯವು ಸೋಮಶೇಖರ್ ರೆಡ್ಡಿಗೆ ಶಿಕ್ಷೆ ವಿಧಿಸಿ ಆದೇಶಿಸಿತ್ತು.
ಇದನ್ನೂ ಓದಿ:3.5 ಕೋಟಿ ಡೀಲ್ ಮಾಡಿದ್ದು ಕಾಂಗ್ರೆಸ್ನವರು- ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ: ಸೋಮಶೇಖರ ರೆಡ್ಡಿ