ಬೆಂಗಳೂರು: ಪರಿಷತ್ ಸದಸ್ಯರಾಗಿ ಇಂದಿಗೆ ನಾಲ್ಕು ದಶಕಗಳನ್ನು ಪೂರೈಸಿದ ಪಕ್ಷದ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅಭಿನಂದನೆ ಸಲ್ಲಿಸಿದ್ದಾರೆ.
ಮೇಲ್ಮನೆ ಸದಸ್ಯರಾಗಿ 40 ವರ್ಷ ಪೂರೈಸಿದ ಹೊರಟ್ಟಿ: ದೇವೇಗೌಡರಿಂದ ಅಭಿನಂದನೆ - ಬೆಂಗಳೂರು ಬಸವರಾಜ ಹೊರಟ್ಟಿ ಸುದ್ದಿ
ಮಾಜಿ ಶಿಕ್ಷಣ ಸಚಿವರು ಹಾಗೂ ಸಭಾಪತಿಗಳಾಗಿ ಸೇವೆ ಸಲ್ಲಿಸಿರುವ ನಮ್ಮ ಪಕ್ಷದ ಹಿರಿಯ ಮುಖಂಡ ಬಸವರಾಜ ಹೊರಟ್ಟಿಯವರು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನವನ್ನು ಸ್ವೀಕರಿಸಿ ಇಂದಿಗೆ 40 ವರ್ಷಗಳಾಗಿದೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾಜಿ ಶಿಕ್ಷಣ ಸಚಿವರು ಹಾಗೂ ಸಭಾಪತಿಗಳಾಗಿ ಸೇವೆ ಸಲ್ಲಿಸಿರುವ ನಮ್ಮ ಪಕ್ಷದ ಹಿರಿಯ ಮುಖಂಡ ಬಸವರಾಜ ಹೊರಟ್ಟಿಯವರು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನವನ್ನು ಸ್ವೀಕರಿಸಿ ಇಂದಿಗೆ 40 ವರ್ಷಗಳಾಗಿದೆ ಎಂದು ತಿಳಿಸಿದ್ದಾರೆ. ಬಸವರಾಜ ಹೊರಟ್ಟಿ ಅವರ ಈ ಸುಧೀರ್ಘ ಸೇವೆ ಭಾರತದ ರಾಜಕೀಯ ಇತಿಹಾಸದ ಒಂದು ದಾಖಲೆಯಾಗಿದ್ದು, ಅವರಿಗೆ ಶುಭಾಶಯ ಎಂದು ತಿಳಿಸಿದ್ದಾರೆ.