ಕರ್ನಾಟಕ

karnataka

ETV Bharat / state

ಸೋನಿಯಾ-ದೇವೇಗೌಡರ ವಿಡಿಯೋ ಸಂವಾದ: ಕೇಂದ್ರದ ಮುಂದೆ 8 ಬೇಡಿಕೆಗಳು - ಕಾಂಗ್ರೆಸ್‌ ಸಭೆ

ಕೊರೊನಾ ಸೋಂಕು ನಿರ್ವಹಣೆ ಹಾಗೂ ಘೋಷಿತ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೇಶದ ಎಲ್ಲ ರಾಜ್ಯಗಳ ಪ್ರತಿಪಕ್ಷ ನಾಯಕರ ಜೊತೆ ಚರ್ಚೆ ನಡೆಸಿದರು.

HD Deve Gowda - Sonia Gandhi at video conference
ವಿಡಿಯೋ ಕಾನ್ಫರೆನ್ಸ್​ನಲ್ಲಿ ಹೆಚ್.ಡಿ.ದೇವೇಗೌಡ - ಸೋನಿಯಾ ಗಾಂಧಿ ಚರ್ಚೆ

By

Published : May 22, 2020, 6:36 PM IST

Updated : May 22, 2020, 11:29 PM IST

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ದೇಶದ ಎಲ್ಲ ರಾಜ್ಯಗಳ ಪ್ರತಿಪಕ್ಷ ನಾಯಕರ ಜೊತೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಭಾಗವಹಿಸಿದ್ದರು.

ಸೋನಿಯಾ ಗಾಂಧಿ ವಿಡಿಯೋ ಸಂವಾದದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಭಾಗಿ

ಕೊರೊನಾ ಸೋಂಕು ನಿಯಂತ್ರಣದ ನಿರ್ವಹಣೆ ಹಾಗೂ ಕೇಂದ್ರ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಕುರಿತು ಸೋನಿಯಾ ಗಾಂಧಿ ಅವರ ಜೊತೆ ಚರ್ಚಿಸಿದರು.

ವಿಡಿಯೋ ಕಾನ್ಫರೆನ್ಸ್​ನಲ್ಲಿ ದೇವೇಗೌಡರ ಜೊತೆ ಮಾತನಾಡಿದ ಸೋನಿಯಾ ಗಾಂಧಿ ಅವರು, ಕೊರೊನಾ ವೈರಸ್​ನಿಂದ ರಾಜ್ಯದಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಇದಕ್ಕೂ ಮುನ್ನ ಪರದೆ ಮೇಲೆ ಸೋನಿಯಾ ಗಾಂಧಿ ಅವರು ಬರುತ್ತಿದ್ದಂತೆ ದೇವೇಗೌಡರು ಎದ್ದು ನಿಂತು ಕೈ ಮುಗಿದರು. ನಂತರ ಸೋನಿಯಾ ಗಾಂಧಿ ಅವರು ಮಾಜಿ ಪ್ರಧಾನಿಯ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ರಾಜ್ಯಸಭೆ ಸದಸ್ಯ ಕುಪೇಂದ್ರ ರೆಡ್ಡಿ ಉಪಸ್ಥಿತರಿದ್ದರು. ವಿಡಿಯೋ ಕಾನ್ಫರೆನ್ಸ್​ನಲ್ಲಿ ಎಂ.ಕೆ. ಸ್ಟಾಲಿನ್, ಮಮತಾ ಬ್ಯಾನರ್ಜಿ, ಶರದ್ ಪವಾರ್, ಸಂಜಯ್ ರಾವತ್ , ಹೇಮಂತ್ ಸೂರೇನ್ ಮತ್ತಿತರ ಭಾಗವಹಿಸಿದ್ದರು.

ಸಭೆ ಬಳಿಕ ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್‌ ಸುರ್ಜೇವಾಲ, ದೇಶದಲ್ಲಿನ ಸದ್ಯದ ಪರಿಸ್ಥಿತಿ ಕುರಿತು 22 ಸಮಾನ ಮನಸಿನ ಪಕ್ಷಗಳು ಇಂದು ಸಭೆ ನಡೆಸಲಾಗಿದೆ. ಲಾಕ್‌ಡೌನ್‌ನಿಂದಾಗಿ ಆದಾಯದ ಮೂಲಕಳು ಇಲ್ಲವಾಗಿವೆ. ಹೀಗಾಗಿ, ಎಲ್ಲಾ ಕುಟುಂಬಗಳಿಗೆ ಪ್ರತಿ ತಿಂಗಳು ತಲಾ 7,500 ರೂ. ಮತ್ತು ಉಚಿತವಾಗಿ 10 ಕೆಜಿ ಆಹಾರ ಪದಾರ್ಥಗಳು ಮುಂದಿನ ಆರು ತಿಂಗಳವರೆಗೆ ನೀಡಬೇಕು ಎಂದು ಒತ್ತಾಯಿಸಲಾಗಿದೆ ಎಂದು ಹೇಳಿದ್ದಾರೆ.

ಮನ್ರೇಗಾದಲ್ಲಿ ಕೂಲಿ ದಿನಗಳನ್ನು 200ಕ್ಕೆ ಹೆಚ್ಚಿಸುವ ಜೊತೆಗೆ ಅಗತ್ಯ ನೆರವು ನೀಡುವುದು, ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ತೆರಳಲು ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಬೇಕು. ಹೊರದೇಶದಲ್ಲಿ ಸಿಲುಕಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ನಾಗರಿಕರನ್ನು ದೇಶಕ್ಕೆ ಕರೆತರು ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ 8 ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಎಲ್ಲಾ ಬೇಡಿಕೆಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Last Updated : May 22, 2020, 11:29 PM IST

ABOUT THE AUTHOR

...view details