ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನ ಶುಭಾಶಯ ಕೋರಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ನಿಮ್ಮ ಆರೋಗ್ಯ ಉತ್ತಮವಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಪ್ರಧಾನಿ ಮೋದಿ ಜನ್ಮದಿನಕ್ಕೆ ಶುಭಾಶಯ ಕೋರಿದ ದೇವೇಗೌಡ - ಪ್ರಧಾನಿ ಮೋದಿ ಜನ್ಮದಿನ
70ನೇ ವರ್ಷದ ಜನ್ಮದಿನದ ಸಂಭ್ರಮದಲ್ಲಿರುವ ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಶುಭಾಶಯ ತಿಳಿಸಿದ್ದಾರೆ.

ಮೋದಿ ಜನ್ಮದಿಕ್ಕೆ ಶುಭಕೋರಿದ ಹೆಚ್ಡಿಡಿ
ಶುಭಾಶಯ ಕೋರಿ ಟ್ವೀಟ್ ಮಾಡಿರುವ ಹೆಚ್.ಡಿ.ದೇವೇಗೌಡ, ಕೋವಿಡ್, ಆರ್ಥಿಕ ಬಿಕ್ಕಟ್ಟು ಮತ್ತು ಗಡಿಯಲ್ಲಿ ಚೀನಾ ಉಪಟಳದ ಮಧ್ಯೆ ನೀವು ನಮ್ಮ ರಾಷ್ಟ್ರವನ್ನು ಬಹಳ ಕಷ್ಟದ ಸಮಯದಲ್ಲಿ ಮುನ್ನಡೆಸುತ್ತಿದ್ದೀರಿ. ಈ ಸಂದರ್ಭದಲ್ಲಿ ನಾಗರಿಕನಾಗಿ ಮತ್ತು ಸಹೋದ್ಯೋಗಿಯಾಗಿ ಈ ಮಹಾನ್ ರಾಷ್ಟ್ರದ ಶಾಂತಿ ಮತ್ತು ಸಮೃದ್ಧಿ ನಿರ್ವಹಿಸಲು ನೀವು ಮಾಡುತ್ತಿರುವ ಎಲ್ಲಾ ಪ್ರಯತ್ನಗಳಿಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಪುನರುಚ್ಚರಿಸಿದ್ದಾರೆ.