ಬೆಂಗಳೂರು: ಶತಾಯುಷಿ ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಹೆಚ್ಡಿಡಿ ಸಂತಾಪ:
ಬೆಂಗಳೂರು: ಶತಾಯುಷಿ ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಹೆಚ್ಡಿಡಿ ಸಂತಾಪ:
ಸ್ವಾತಂತ್ರ್ಯ ಹೋರಾಟಗಾರರು, ಪತ್ರಕರ್ತರು, ಶತಾಯುಷಿಗಳಾದ ಹೆಚ್.ಎಸ್.ದೊರೆಸ್ವಾಮಿಯವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ತಮ್ಮ ಜೀವನದುದ್ದಕ್ಕೂ ಸಮಾಜದ ಏಳಿಗೆಗೆ ದುಡಿದ ಒಬ್ಬ ಮಹಾನ್ ಸಾಮಾಜಿಕ ಹೋರಾಟಗಾರರನ್ನು ಕಳೆದುಕೊಂಡು ನಮ್ಮ ರಾಜ್ಯ ಇಂದು ಬಡವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಈ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ಧಾರೆ.
ಹೆಚ್ಡಿಕೆ ಸಂತಾಪ:
ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಗಾಂಧಿವಾದಿ, ಪ್ರಾತಃಸ್ಮರಣೀಯರು ಹಾಗೂ ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ ದೊರೆಸ್ವಾಮಿ ಅವರ ನಿಧನದಿಂದ ಶತಮಾನದ ಮಹಾನ್ ಹೋರಾಟಗಾರರನ್ನು ಕಳೆದುಕೊಳ್ಳುವ ಮೂಲಕ ನಾಡು ಹಾಗೂ ದೇಶ ಬಡವಾಗಿದೆ ಎಂದಿದ್ದಾರೆ. ಶತಾಯುಷಿಯಾಗಿದ್ದರೂ ದಣಿವರಿಯದ ಅವರ ಹೋರಾಟದ ಕಿಚ್ಚು ಮತ್ತು ಸಾಮಾಜಿಕ ಬದ್ಧತೆ ಅನನ್ಯ. ಹತ್ತಾರು ಬಾರಿ ಅವರನ್ನು ಭೇಟಿ ಮಾಡಿ ಚರ್ಚಿಸಿ, ಮಾರ್ಗದರ್ಶನ ಮತ್ತು ಆಶೀರ್ವಾದ ಪಡೆದಿದ್ದೇನೆ. ಅದು ನನ್ನ ಭಾಗ್ಯ ಎಂದು ಹೇಳಿದ್ದಾರೆ.