ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿ ಎಂದು ಹೆಚ್​​​ಡಿಡಿ-ಹೆಚ್​​​ಡಿಕೆ ಹಾರೈಕೆ - Bangalore HDD and HDK prayed Siddaramaiah a speedy recovery News

ಆತ್ಮೀಯರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಕೇಳಿ ಮನಸ್ಸಿಗೆ ಬಹಳ ನೋವುಂಟಾಯಿತು. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ  ಟ್ವೀಟ್
ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್

By

Published : Aug 4, 2020, 9:47 AM IST

ಬೆಂಗಳೂರು:ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ದೇವೇಗೌಡರು, ಆತ್ಮೀಯರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಕೇಳಿ ಮನಸ್ಸಿಗೆ ಬಹಳ ನೋವುಂಟಾಯಿತು. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು, ಶಿಸ್ತುಬದ್ಧ ಜೀವನ ಅಳವಡಿಸಿಕೊಳ್ಳುವ ಮೂಲಕ ಅಮೂಲ್ಯವಾದ ಜೀವ ಮತ್ತು ಜೀವನವನ್ನು ರಕ್ಷಿಸಿಕೊಳ್ಳಬೇಕು ಸಾರ್ವಜನಿಕರಿಗೂ ಮನವಿ ಮಾಡಿದ್ದಾರೆ.

ABOUT THE AUTHOR

...view details