ಬೆಂಗಳೂರು : ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಇಂದು ಮತ್ತು ನಾಳೆ ಹಾಸನ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ.
ಇಂದು, ನಾಳೆ ಹಾಸನದಲ್ಲಿ ದೊಡ್ಡಗೌಡರ ಅಬ್ಬರ - ಹಾಸನ
ಪ್ರಜ್ವಲ್ ರೇವಣ್ಣ ಪರವಾಗಿ ಇಂದು ಮತ್ತು ನಾಳೆ ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಪ್ರಚಾರ ಕೈಗೊಳ್ಳಲಿದ್ದಾರೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಬೇಲೂರು ತಾಲೂಕು ಮತ್ತು ಸಕಲೇಶಪುರ ತಾಲೂಕಿನಲ್ಲಿ ಇಂದು ಮತ್ತು ನಾಳೆ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಹಾಸನ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟು ಕ್ಷೇತ್ರ ಬದಲಿಸಿರುವ ದೇವೇಗೌಡರು, ತುಮಕೂರು ಲೋಕಸಭಾ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಆದರೆ, ಗೌಡರು ಇನ್ನು ತಮ್ಮ ಕ್ಷೇತ್ರದಲ್ಲಿ ಅಧಿಕೃತವಾಗಿ ಪ್ರಚಾರಕ್ಕೆ ಇಳಿದಿಲ್ಲ. ಏ. 10 ರಿಂದ ದೇವೇಗೌಡರು ಚುನಾವಣಾ ಪ್ರಚಾರ ಕೈಗೊಳ್ಳುವ ಸಾಧ್ಯತೆ ಇದೆ.