ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೊನಾ ದೃಢಪಟ್ಟಿದೆ. ಅವರಿಬ್ಬರೂ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಹಾರೈಸಿದ್ದಾರೆ.
ಸಭಾಪತಿ ಹೊರಟ್ಟಿ, ಸ್ಪೀಕರ್ ಕಾಗೇರಿ ಶೀಘ್ರ ಗುಣಮುಖರಾಗಲಿ: ಹೆಚ್.ಡಿ. ದೇವೇಗೌಡ ಹಾರೈಕೆ - ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆದಷ್ಟು ಬೇಗ ಕೊರೊನಾದಿಂದ ಗುಣಮುಖರಾಗಲಿ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಹಾರೈಸಿದ್ದಾರೆ.

ಹೆಚ್.ಡಿ ದೇವೇಗೌಡ
ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ ಅವರು ಕೊರೊನಾ ಸೋಂಕಿನಿಂದ ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಕರ್ನಾಟಕ ವಿಧಾನಸಭೆಯ ಸಭಾಪತಿಗಳಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೂ ಕೂಡ ಕೊರೊನಾ ಸೋಂಕಿಗೆ ತುತ್ತಾಗಿರುವ ವಿಷಯ ತಿಳಿಯಿತು. ಅವರೂ ಸಹ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.