ಕರ್ನಾಟಕ

karnataka

By

Published : Jan 30, 2020, 7:41 PM IST

ETV Bharat / state

ಕೇಂದ್ರ ಸರ್ಕಾರದ ಬಜೆಟ್ ಮೇಲೆ ನನಗೆ ಯಾವುದೇ ನಿರೀಕ್ಷೆ ಇಲ್ಲ: ಹೆಚ್​ಡಿಕೆ ವ್ಯಂಗ್ಯ

ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಮಂಡಿಸುವ ಬಜೆಟ್​ನ ಮೇಲೆ ನನಗೆ ಯಾವುದೇ ರೀತಿಯ ನಿರೀಕ್ಷೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

HD.Kumaraswamy
ಹೆಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಮಂಡಿಸುವ ಬಜೆಟ್​​ ಮೇಲೆ ನನಗೆ ಯಾವುದೇ ನಿರೀಕ್ಷೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಕರ್ನಾಟಕಕ್ಕೆ ದೊಡ್ಡಮಟ್ಟದ ನೆರವು ಸಿಗುತ್ತದೆ ಎನ್ನುವ ನಿರೀಕ್ಷೆಯೂ ನನಗಿಲ್ಲ ಎಂದಿರುವ ಹೆಚ್​.ಡಿ. ಕುಮಾರಸ್ವಾಮಿ, ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ಲೇವಡಿ ಮಾಡಿದ್ದಾರೆ. ಅಲ್ಲದೆ ಕಳೆದ ವರ್ಷ ಬಜೆಟ್​ನಲ್ಲಿ ಕೊಡಬೇಕಾಗಿರುವ 17,000 ಕೋಟಿಯನ್ನು ಈಗಾಗಲೇ ಕಡಿತಗೊಳಿಸಿದ್ದಾರೆ. ಹೀಗಿರುವಾಗ ಹೊಸದಾಗಿ ಮೋದಿ ಅವರಿಂದ ಏನನ್ನು ನಿರೀಕ್ಷೆ ಮಾಡುತ್ತೀರಿ ಎಂದು ಹೆಚ್​ಡಿಕೆ ಪ್ರಶ್ನಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಮತ್ತೊಂದು ಕಡೆ ಮಳೆಯ ಅನಾಹುತದಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಇದಲ್ಲದೆ ಕೇಂದ್ರ ಸರ್ಕಾರದ ಚುನಾವಣೆಗಳು ಹಾಗೂ ಈಗ ಹೊಸದಾಗಿ ಜಾರಿಗೆ ತಂದಿರುವ ಸಿಎಎ ಹಾಗೂ ಎನ್​ಆರ್​​ಸಿ ಇವುಗಳಿಗೆ ಸರ್ಕಾರ ಪ್ರಾಶಸ್ತ್ಯ ಕೊಟ್ಟಿದೆ. ಆದ್ರೆ ಬಜೆಟ್ ಬಗ್ಗೆ ಹಾಗೂ ಆರ್ಥಿಕ ಸಂಕಷ್ಟ, ಆರ್ಥಿಕ ಕುಸಿತದ ಬಗ್ಗೆ ಸರ್ಕಾರ ಗಮನ ಕೊಡ ಬೇಕಿದೆ ಎಂದು ತಿಳಿಸಿದರು.

ಕಳೆದ ಅವಧಿಯಲ್ಲಿ ಕೇಂದ್ರ ಸರ್ಕಾರ ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿದ್ದರು. ಈಗ ಅವರ ಮಾತಿನಂತೆ ಕೇಂದ್ರ ಸರ್ಕಾರ ರೈತರ ಆದಾಯವನ್ನು ದ್ವಿಗುಣಗೊಳಿಸುವುದರ ಬಗ್ಗೆ ಕಾರ್ಯಕ್ರಮವನ್ನು ಜಾರಿಗೊಳಿಸಬೇಕು. ಈ ಬಜೆಟ್​ನಲ್ಲಿ ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯಾವ ರೀತಿಯ ಕೊಡುಗೆ ಕೊಡುತ್ತಾರೋ ಕಾದು ನೋಡೋಣ ಎಂದು ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ABOUT THE AUTHOR

...view details