ಕರ್ನಾಟಕ

karnataka

ETV Bharat / state

ಕೊರೊನಾ ಬಿಕ್ಕಟ್ಟು: ಹುಟ್ಟುಹಬ್ಬ ಆಚರಿಸದಿರಲು ಮಾಜಿ ಸಿಎಂ ಹೆಚ್​ಡಿಕೆ ನಿರ್ಧಾರ - ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

ಕೊರೊನಾ ಸಂಕಷ್ಟದ ಹಿನ್ನೆಲೆ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದು, ಈ ಬಗ್ಗೆ ಟ್ವಿಟ್​ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

HD Kumara Swamy
ಕುಮಾರಸ್ವಾಮಿ

By

Published : Dec 14, 2020, 3:10 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಡಿಸೆಂಬರ್ 16 ನನ್ನ‌ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಡಿ.16 ರಂದು ನನ್ನ ಜನ್ಮದಿನ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೇ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು ಎಂದಿದ್ದಾರೆ.

ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ‌ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ ಎಂದು ಹೆಚ್​ಡಿಕೆ ಹೇಳಿದ್ದಾರೆ.

ಇದನ್ನೂ ಓದಿ...ದೇವೇಗೌಡರನ್ನು ಭೇಟಿ ಮಾಡಿದ ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ

ABOUT THE AUTHOR

...view details