ETV Bharat Karnataka

ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಜನರಿಗೆ ಮೇಕೆದಾಟು ಮಕ್ಮಲ್ ಟೋಪಿ ಹಾಕುತ್ತಿದೆ: ಎಚ್ಡಿಕೆ - ಕರ್ನಾಟಕ ಕಾಂಗ್ರೆಸ್​ ಪಕ್ಷ

ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆಯ ವಿಷಯದಲ್ಲಿ ಜನರಿಗೆ ಮಕ್ಮಲ್ ಟೋಪಿ ಹಾಕುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

HD Kumaraswamy spark on Congress party, HD Kumaraswamy news, Karnataka Congress party, Makedatu project,   ಕಾಂಗ್ರೆಸ್​ ಪಕ್ಷದ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಕಿಡಿ, ಹೆಚ್​ಡಿ ಕುಮಾರಸ್ವಾಮಿ ಸುದ್ದಿ, ಕರ್ನಾಟಕ ಕಾಂಗ್ರೆಸ್​ ಪಕ್ಷ, ಮೇಕೆದಾಟು ಯೋಜನೆ,
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
author img

By

Published : Dec 29, 2021, 11:40 AM IST

ಬೆಂಗಳೂರು:ಕೃಷ್ಣೆಯ ಕಡೆಗೆ, ಕಾಂಗ್ರೆಸ್ ನಡಿಗೆ ಎಂದು ಹೇಳಿ ಉತ್ತರ ಕರ್ನಾಟಕದ ಜನರಿಗೆ ಟೋಪಿ ಹಾಕಿದ ಕಾಂಗ್ರೆಸ್ ನಾಯಕರು, ಈಗ ಮೇಕೆದಾಟು ಪಾದಯಾತ್ರೆ ಹೆಸರಿನಲ್ಲಿ ಈ ಭಾಗದ ಜನರಿಗೂ ಮಕ್ಮಲ್ ಟೋಪಿ ಹಾಕಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ನೀಡಿರುವ ಆಹ್ವಾನದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ. ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷರು. ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ‘ಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ ಎಂದರು.

ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಹೆಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರು ಹರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ ಎಂದಿದ್ದಾರೆ.

ABOUT THE AUTHOR

author-img

...view details