ಕರ್ನಾಟಕ

karnataka

ETV Bharat / state

ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪಲ್ಲ,'ಹಿಂದಿ ದಿವಸ' ಆಚರಣೆಯನ್ನೂ ಸಹಿಸಲ್ಲ: ಹೆಚ್​ಡಿಕೆ

ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಹೆಚ್.​ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಭಾರತ ಹಲವು ಭಾಷೆಗಳ ದೇಶ, ಎಲ್ಲಾ ಭಾಷೆಗಳಿಗೂ ಸಮಾನ ಸ್ಥಾನಮಾನಗಳಿವೆ. ಹಿಂದಿ ಹೇರಿಕೆ ರಾಜ್ಯದ ಮೇಲೆ ಸಲ್ಲದು ಎಂದಿದ್ದಾರೆ.

HD Kumaraswamy
ಹೆಚ್​​​ಡಿ ಕುಮಾರಸ್ವಾಮಿ

By

Published : Sep 13, 2021, 8:48 PM IST

ಬೆಂಗಳೂರು:ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ ಎಂದು ಮಾಜಿ ಸಿಎಂ ಹೆಚ್​​​.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿದ ಅವರು, ಒಕ್ಕೂಟದ ಎಲ್ಲಾ ಭಾಷೆಗಳಂತೆ ಹಿಂದಿಯೂ ಒಂದು ಭಾಷೆಯಷ್ಟೇ. ಕೇಂದ್ರ ಸರ್ಕಾರ ಹಿಂದಿಗೆ ಇಂದ್ರ ವೈಭೋಗ ನೀಡಿ ಅನ್ಯ ಭಾಷೆಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು. ಭಾರತ ಒಕ್ಕೂಟ ರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ಎಂದು ಪ್ರಶ್ನಿಸಿದ್ದಾರೆ.

ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ, ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆಯಾಗಿದೆ. ಕನ್ನಡ 6.4 ಕೋಟಿ ಜನರ ಹೃದಯಮಿಡಿತವಾಗಿದೆ. ನಮ್ಮ ಪಾಲಿನ ಮಾತೃಸ್ವರೂಪಿಣಿ, ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು, ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ ಎಂದು ಒತ್ತಾಯಿಸಿದ್ದಾರೆ.

ಇದನ್ನೂಓದಿ: ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ?: ಇದು ಶುದ್ಧ ಸುಳ್ಳು ಎಂದ ಬಾಲಕಿ, ಆಕೆಯ ತಂದೆ

For All Latest Updates

ABOUT THE AUTHOR

...view details